ಬೆಂಗಳೂರು, ಆಗಸ್ಟ್ 04: ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿನ ಸಮಸ್ಯೆಗಳ ಕುರಿತು ವಿದ್ಯಾರ್ಥಿಗಳು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಕಳೆದ 20 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು, 101 ಸೀಟುಗಳ ಭರ್ತಿಯಲ್ಲಿನ ಅನ್ಯಾಯ ಮತ್ತು 15% ಕೋಟಾ ಸಂಬಂಧಿಸಿದಂತೆ ತಮ್ಮ ಅಹವಾಲುಗಳನ್ನು ಸಿಎಂ ಅವರ ಮುಂದಿಟ್ಟಿದ್ದು, ಕಳೆದ 10 ವರ್ಷಗಳಿಂದ ಯಾವುದೇ ನೇಮಕಾತಿ ನಡೆದಿಲ್ಲ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
