ಢಾಕಾ, ಮೇ.1: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಬಾಂಗ್ಲಾದೇಶದ ಸಂಸತ್ತಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಢಾಕಾ ದೊಡ್ಡ ಮಟ್ಟದ ನಿರಾಶ್ರಿತರ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಎಂದು ಬಾಂಗ್ಲಾದೇಶದ ಎನ್‌ಸಿಪಿ (NCP) ಸದಸ್ಯ ಕಾರ್ಯದರ್ಶಿ ಅಖ್ತರ್ ಹೊಸೈನ್ ಆತಂಕ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ, ಅಲ್ಲಿರುವ ಬಾಂಗ್ಲಾದೇಶಿ ನಿವಾಸಿಗಳನ್ನೆಲ್ಲ ಮರಳಿ ಕಳುಹಿಸಲಾಗುತ್ತದೆ ಎಂದು ಹೊಸೈನ್ ಪ್ರತಿಪಾದಿಸಿದ್ದಾರೆ. “ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಗೆಲ್ಲುವ ಮುನ್ಸೂಚನೆ ಸಿಕ್ಕರೆ ಅಥವಾ ಅಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ, ಅವರು ಎಲ್ಲಾ ಬಾಂಗ್ಲಾದೇಶಿಗಳನ್ನು ಮರಳಿ ನಮ್ಮ ದೇಶಕ್ಕೆ ತಳ್ಳುತ್ತಾರೆ. ಇದು ನಮಗೆ ದೊಡ್ಡ ನಿರಾಶ್ರಿತರ ಬಿಕ್ಕಟ್ಟನ್ನು ಸೃಷ್ಟಿಸಲಿದೆ,” ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಅಕ್ರಮ ವಲಸಿಗರನ್ನು ಢಾಕಾದ ಕಡೆಗೆ ತಳ್ಳುವ ಸಾಧ್ಯತೆ ಇರುವುದರಿಂದ ಎಲ್ಲಾ ಪಕ್ಷಗಳು ಒಗ್ಗೂಡಿ ನಿಲ್ಲಬೇಕು ಎಂದು ಅವರು ಕರೆ ನೀಡಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
