Headlines

ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ – Kannada News | Sunetra Pawar elected NCP national president Month After Ajit Pawar Death

ಮುಂಬೈ, ಫೆಬ್ರವರಿ 26: ಮಹಾರಾಷ್ಟ್ರದ ಬಾರಾಮತ್‌ನಲ್ಲಿ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟ ಒಂದು ತಿಂಗಳ ಬಳಿಕ ಇಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್​ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರನ್ನು ಆಯ್ಕೆ ಮಾಡಲಾಗಿದೆ. ಎನ್​ಸಿಪಿ ಕಾರ್ಯಕಾರಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಮತ್ತು ಸುನೇತ್ರಾ ಪವಾರ್ ಅವರು ಅಧಿಕಾರ ವಹಿಸಿಕೊಳ್ಳುವ ಪ್ರಸ್ತಾಪವನ್ನು ಮಂಡಿಸಿದ್ದ ಹಿರಿಯ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಇಂದು ಈ ಘೋಷಣೆ ಮಾಡಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಅವರ ಸ್ಥಾನವನ್ನು ವಹಿಸಿಕೊಂಡ ಸುನೇತ್ರಾ ಪವಾರ್ ಅವರು ಎನ್‌ಸಿಪಿಯ ರಾಷ್ಟ್ರೀಯ ಮುಖ್ಯಸ್ಥರಾಗಲಿದ್ದಾರೆ ಎಂಬ ಸುದ್ದಿ ಕಳೆದ ವಾರ ಪಕ್ಷದ ಶಾಸಕರು ಅವರ ನಾಮನಿರ್ದೇಶನವನ್ನು ಬೆಂಬಲಿಸಿದ ನಂತರ ಹೊರಹೊಮ್ಮಿತ್ತು. ಇಂದು ಅಧಿಕೃತ ಘೋಷಣೆ ಹೊರಬಿದ್ದಿದೆ.

ಇದನ್ನೂ ಓದಿ: “ಮಹಾ ರಾಜಕೀಯ”ದಲ್ಲಿ ಮಹತ್ವ ಬೆಳವಣಿಗೆ: ಫೆ.8ಕ್ಕೆ ಅಜಿತ್ ಪವಾರ್ ಕೊನೆಯ ಆಸೆ ಈಡೇರಲಿದೆ?

ಈ ತಿಂಗಳ ಆರಂಭದಲ್ಲಿ ಸುನೇತ್ರಾ ಪವಾರ್ ಅವರು ತಮ್ಮ ಪತಿ ಮರಣ ಹೊಂದಿದ 13 ದಿನಗಳ ನಂತರ ಉಪ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರ ವಹಿಸಿಕೊಂಡರು.

“ಅಜಿತ್ ಪವಾರ್ ಅವರ ಅಪೂರ್ಣ ಕನಸುಗಳನ್ನು ನನಸಾಗಿಸುವುದು, ರೈತರು, ಮಹಿಳೆಯರು, ಯುವಕರು ಮತ್ತು ಸಾಮಾನ್ಯ ನಾಗರಿಕರ ನಿರೀಕ್ಷೆಗಳಿಗೆ ನ್ಯಾಯ ಒದಗಿಸುವುದು ನನ್ನ ಪ್ರಮುಖ ಆದ್ಯತೆಯಾಗಿದೆ. ಅವರ ಪರಂಪರೆಯನ್ನು ಉಳಿಸಿಕೊಳ್ಳಲು ಮತ್ತು ಬಲವಾದ ಮತ್ತು ಹೆಚ್ಚು ಸಮರ್ಥ ಮಹಾರಾಷ್ಟ್ರವನ್ನು ನಿರ್ಮಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಸುನೇತ್ರಾ ಪವಾರ್ ಇಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *