ತುಮಕೂರು, ಫೆಬ್ರವರಿ 08: ನಗರದ ಯಡಿಯೂರಿನ ಎಸ್.ಎಲ್.ಎನ್ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ವಿವಾಹವೊಂದನ್ನು ಮೊದಲ ಪತ್ನಿ ತಡೆದು ನಿಲ್ಲಿಸಿರುವಂತಹ ಘಟನೆ ನಡೆದಿದೆ. ಆ ಮೂಲಕ ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲನೇ ಪತ್ನಿ ಶಾಕ್ ನೀಡಿದ್ದಾರೆ. ಹರಿಪ್ರಸಾದ್ ಎಂಬುವರು ವಿಚ್ಛೇದನ ನೀಡದೇ ಎರಡನೇ ಮದುವೆಗೆ ಮುಂದಾಗಿದ್ದರು. ಅವರ ಮೊದಲ ಪತ್ನಿ ಲೇಪಾಕ್ಷಿ ಪೊಲೀಸರೊಂದಿಗೆ ಮದುವೆ ಮಂಟಪಕ್ಕೆ ಆಗಮಿಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
