
ಬೆಂಗಳೂರು, ಮಾರ್ಚ್ 26: ಕರ್ನಾಟಕದಾದ್ಯಂತ ಮಾರ್ಚ್ 18ರಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭವಾಗಿದೆ. ಈಗಾಗಲೇ ಕೆಲ ಪರೀಕ್ಷೆಗಳು ನಡೆದಿವೆ. ಆದರೆ ಮಾ.30ರಂದು ನಡೆಯಬೇಕಿದ್ದ ಹಿಂದಿ ಪರೀಕ್ಷೆಯನ್ನು ಇದೀಗ ಮುಂದೂಡಲಾಗಿದೆ. ಮಾ.30ರಂದು ಮಹಾವೀರ ಜಯಂತಿ ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದ್ದು, ಮಾ. 31ರಂದು ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.