ಎಡ್ಜ್ಬಾಸ್ಟನ್ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬೌಲಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಆರಂಭಿಕ ಹಿನ್ನಡೆಯ ಬಳಿಕ ಅದ್ಭುತ ಪುನರಾಗಮನ ಮಾಡಿದೆ. ಮೊದಲ ವಿಕೆಟ್ ಕಬಳಿಸಲು 61 ರನ್ಗಳನ್ನು ಬಿಟ್ಟುಕೊಟ್ಟಿದ್ದ ಟೀಂ ಇಂಡಿಯಾ ಆ ಬಳಿಕ ಪ್ರಮುಖ 5 ವಿಕೆಟ್‌ಗಳನ್ನು ಕೇವಲ 19 ರನ್ಗಳ ಅಂತರದಲ್ಲಿ ಪಡೆದುಕೊಂಡಿದೆ. ಇದರಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರ ಕೊಡುಗೆಯೂ ಅಪಾರವಾಗಿದೆ. ಪ್ರಸಿದ್ಧ್ ಒಂದೇ ಓವರ್ನಲ್ಲಿ ಎರಡು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರು. ಮೊದಲಿಗೆ ಅನುಭವಿ ಬಟ್ಲರ್ ವಿಕೆಟ್ ಪಡೆದ ಪ್ರಸಿದ್ಧ್ ಆ ಬಳಿಕ ಆಲ್‌ರೌಂಡರ್ ಸ್ಯಾಮ್ ಕರನ್ ಅವರನ್ನು ಖಾತೆ ತೆರೆಯಲು ಬಿಡಲಿಲ್ಲ.
