ಬೆಂಗಳೂರು, ಏಪ್ರಿಲ್ 28: ಐಪಿಎಲ್ ಪಂದ್ಯಾವಳಿಗಳ ಸಂದರ್ಭದಲ್ಲಿ ಅಕ್ರಮವಾಗಿ ಹೆಚ್ಚಿನ ಬೆಲೆಗೆ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ಬ್ಲಾಕ್ ಮಾರ್ಕೆಟ್ ದಂಧೆಕೋರರಿಗೆ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ, ಪೊಲೀಸರು 17 ಪ್ರಕರಣಗಳನ್ನು ದಾಖಲಿಸಿದ್ದು, ಈ ಸಂಬಂಧ 24 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ 37 ಐಪಿಎಲ್ ಟಿಕೆಟ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 16 ಪ್ರಕರಣಗಳು ದಾಖಲಾಗಿದ್ದರೆ, ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಪ್ರೇಮಿಗಳ ಆಸೆಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚಿನ ಲಾಭ ಗಳಿಸಲು ಯತ್ನಿಸುತ್ತಿದ್ದ ದಂಧೆಕೋರರನ್ನು ಸಿಸಿಬಿ ಅಧಿಕಾರಿಗಳು ಸಹ ದಾಳಿ ನಡೆಸಿ ಬಂಧಿಸಿದ್ದಾರೆ. ಈ ಮೂಲಕ ಐಪಿಎಲ್ ಟಿಕೆಟ್ ಬ್ಲಾಕ್ ಮಾರ್ಕೆಟ್ಗೆ ಕಡಿವಾಣ ಹಾಕುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ