ಐದನೇ ಆವೃತ್ತಿಯ ಮಹಾರಾಜ ಟಿ20 ಟ್ರೋಫಿ ಇದೇ ಜೂನ್ 20 ರಿಂದ ಆರಂಭವಾಗಲಿದ್ದು, ಜುಲೈ 12 ರವರೆಗೆ ನಡೆಯಲಿದೆ. ಈ ಟೂರ್ನಿಗೆ ಇಂದು ಹರಾಜು ಕೂಡ ನಡೆದಿದೆ. ಹರಾಜಿನಲ್ಲಿ ಕರ್ನಾಟಕದ ಸ್ಟಾರ್ ಆಟಗಾರರು ದೊಡ್ಡ ಮೊತ್ತಕ್ಕೆ ಹೊಸ ತಂಡಗಳನ್ನು ಸೇರಿಕೊಂಡಿದ್ದಾರೆ. ಹರಾಜಿನಲ್ಲಿ 150ಕ್ಕೂ ಹೆಚ್ಚು ಆಟಗಾರರು ಅದೃಷ್ಟ ಪರೀಕ್ಷೆಗೆ ಇಳಿದಿದ್ದು, ಎಲ್ಲಾ 6 ತಂಡಗಳು ತಲಾ 60 ಲಕ್ಷ ರೂ. ಹಣದೊಂದಿಗೆ ಆಟಗಾರರ ಖರೀದಿಗಿಳಿದಿವೆ. ಅದರಂತೆ ಐಪಿಎಲ್‌ನಲ್ಲಿ ಆರ್ಸಿಬಿ ತಂಡವನ್ನು ಚಾಂಪಿಯನ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ದೇವದತ್ ಪಡಿಕ್ಕಲ್ ಇದೀಗ ಹೊಸ ತಂಡವನ್ನು ಸೇರಿಕೊಂಡಿದ್ದಾರೆ. ಹರಾಜಿನಲ್ಲಿ ಮೈಸೂರ್ ವಾರಿಯರ್ಸ್ ಫ್ರಾಂಚೈಸಿ ಪಡಿಕ್ಕಲ್ಗೆ 2 ಲಕ್ಷ 60 ಸಾವಿರ ನೀಡಿ ತಂಡಕ್ಕೆ ಸೇರಿಸಿಕೊಂಡಿದೆ.