
ಹುಬ್ಬಳ್ಳಿ, ಮೇ 05: ನಗರದಲ್ಲಿ ಐಷಾರಾಮಿ ಕಾರುಗಳಲ್ಲಿ ಬಂದು ರಸ್ತೆ ಬದಿಯ ಜಾನುವಾರುಗಳನ್ನು ಕಳ್ಳತನ ಮಾಡುತ್ತಿದ್ದ ಶಿವಮೊಗ್ಗ ಮೂಲದ ಮುಬಾರಕ್ ಮತ್ತು ಆತನ ಇಬ್ಬರು ಸ್ನೇಹಿತರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಗ್ಯಾಂಗ್ ಬೇರೆ ಬೇರೆ ಜಿಲ್ಲೆಗಳಿಂದ ಐಷಾರಾಮಿ ಕಾರುಗಳನ್ನು ತಂದು, ಅವುಗಳಿಗೆ ಕಪ್ಪು ಬಣ್ಣದ ಸ್ಟಿಕ್ಕರ್ ಅಂಟಿಸಿ ಗುರುತು ಸಿಗದಂತೆ ಸಂಚರಿಸುತ್ತಿದ್ದರು. ಹುಬ್ಬಳ್ಳಿಯ ಸೆಟಲ್ಮೆಂಟ್ ಹಾಗೂ ಹಳೇ ಹುಬ್ಬಳ್ಳಿ ಭಾಗದಲ್ಲಿ ರಸ್ತೆ ಬದಿಯಲ್ಲಿ ಮಲಗಿದ್ದ ಜಾನುವಾರುಗಳನ್ನು ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗುತ್ತಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ದೃಶ್ಯಗಳನ್ನೇ ಆಧಾರವಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿಗಳಿಗೆ ಹೆಡೆಮುರಿ ಕಟ್ಟಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ