
ಕಿರುತೆರೆ ನಟಿ ಅಮೂಲ್ಯ ಗೌಡ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅದೇ ರೀತಿ ಅಮೃತಾ ರಾಮಮೂರ್ತಿ (Amrutha Ramamoorthi) ಕೂಡ ಸಾಕಷ್ಟು ಹೆಸರು ಮಾಡಿದ್ದಾರೆ. ಇಬ್ಬರಿಗೂ ದೊಡ್ಡ ಫ್ಯಾನ್ ಬೇಸ್ ಇದೆ. ಈಗ ಇಬ್ಬರೂ ಒಂದೇ ಧಾರಾವಾಹಿ ಮೂಲಕ ಬರಲು ರೆಡಿ ಆಗಿದ್ದಾರೆ ಎಂಬುದು ವಿಶೇಷ. ಉದಯ ಟಿವಿಯಲ್ಲಿ ಪ್ರಸಾರ ಆಗಲಿರುವ ಸೀರಿಯಲ್ನ ಭಾಗವಾಗಿ ಅಮೂಲ್ಯ ಗೌಡ ಹಾಗೂ ಅಮೃತಾ ರಾಮಮೂರ್ತಿ ಕಾಣಿಸಿಕೊಳ್ಳಲಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿಯ ವಿಷಯ.
ಅಮೂಲ್ಯ ಗೌಡ ಕನ್ನಡ ಕಿರುತೆರೆ ಲೋಕದಲ್ಲಿ ಸಕ್ರಿಯ ಆಗಿರೋ ಉದಯೋನ್ಮುಖ ನಟಿಯರಲ್ಲಿ ಒಬ್ಬರು. ಅಮೃತಾ ಕೂಡ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಉದಯದಲ್ಲಿ ಪ್ರಸಾರ ಆಗಲಿರುವ ‘ಮಹಾಲಕ್ಷ್ಮೀ ಮದುವೆ’ ಧಾರಾವಾಹಿಯಲ್ಲಿ ನಟಿಸಲಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಶೀಘ್ರವೇ ಧಾರಾವಾಹಿ ಬಗ್ಗೆ ಮತ್ತಷ್ಟು ಅಪ್ಡೇಟ್ ಸಿಗಲಿದೆ.
ಅಮೂಲ್ಯ ಗೌಡ ಅವರು ಕಿರುತೆರೆ ಲೋಕಕ್ಕೆ ಬಂದು 12 ವರ್ಷಗಳೇ ಕಳೆದಿವೆ! ಅಮೂಲ್ಯ ಗೌಡ ಅವರು ಮೊದಲು ನಟಿಸಿದ್ದು ಸ್ವಾತಿ ಮುತ್ತು ಧಾರಾವಾಹಿಯಲ್ಲಿ. ‘ಸ್ಟಾರ್ ಸುವರ್ಣದಲ್ಲಿ’ ಧಾರಾವಾಹಿ ಪ್ರಸಾರ ಕಂಡಿತು. ಈ ಧಾರಾವಾಹಿಯಲ್ಲಿ ಪಾರು ಹೆಸರಿನ ಪಾತ್ರ ಮಾಡಿದರು. ಅವರಿಗೆ ಭರ್ಜರಿ ಜನಪ್ರಿಯತೆ ತಂದುಕೊಟ್ಟ ಸೀರಿಯಲ್ ಎಂದರೆ ‘ಕಮಲಿ’. ಈ ಸೀರಿಯಲ್ 2018ರಿಂದ 2022ರವರೆಗೆ ಪ್ರಸಾರ ಆಯಿತು. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅಮೂಲ್ಯ ಮಿಂಚಿದರು.
ಇದನ್ನೂ ಓದಿ: ಅರ್ಧಕ್ಕೆ ಧಾರಾವಾಹಿ ತೊರೆದ ಅಮೃತಾ ರಾಮಮೂರ್ತಿ
ಇನ್ನು, ಅಮೃತಾ ಅವರು ‘ಕುಲವಧು’, ಮಿಸ್ಟರ್ ಆಂಡ್ ಮಿಸಸ್ ರಂಗೇಗೌಡ ಮೊದಲಾದ ಸೀರಿಯಲ್ನಲ್ಲಿ ನಟಿಸಿದರು. ಕೆಲ ಸಮಯ ‘ಆಸೆ’ ಧಾರಾವಾಹಿಯಲ್ಲಿ ರೋಹಿಣಿ ಹೆಸರಿನ ಪಾತ್ರ ಮಾಡಿದರು. ಇದು ನೆಗೆಟಿವ್ ಶೇಡ್ ಹೊಂದಿದ್ದ ಪಾತ್ರ ಆಗಿತ್ತು. ಅವರ ವೃತ್ತಿ ಜೀವನಕ್ಕೆ ಈ ಧಾರಾವಾಹಿ ಸಾಕಷ್ಟು ಮೈಲೇಜ್ ನೀಡಿತು ಎಂದರೂ ತಪ್ಪಾಗಲಾರದು. ಈಗ ಅವರು ಉದಯ ಟಿವಿ ಮೂಲಕ ಕಂಬ್ಯಾಕ್ ಮಾಡೋಕೆ ರೆಡಿ ಆಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.