ಕೋಲಾರ, ಮೇ 25: ನಗರಸಭೆ ಆರೋಗ್ಯ ವಿಭಾಗದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜನನ, ಮರಣ ಪ್ರಮಾಣಪತ್ರ ವಿತರಣೆ ಆರೋಪ ಬೆನ್ನಲ್ಲೇ ಕೋಲಾರ ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದ್ದಾರೆ. ಜೀವಂತವಾಗಿರುವ ವ್ಯಕ್ತಿಗಳಿಗೆ ಮರಣ ಪ್ರಮಾಣಪತ್ರ ನೀಡಿರುವುದು ಮತ್ತು ಒಂದೇ ನೋಂದಣಿಯಲ್ಲಿ ಇಬ್ಬರು ಮಕ್ಕಳಿಗೆ ಜನನ ಪ್ರಮಾಣಪತ್ರ ವಿತರಿಸಿರುವುದು ಹಾಗೂ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜನಿಸದಿದ್ದರೂ ನಕಲಿ ದಾಖಲೆ ಸೃಷ್ಟಿಸಿ ಜನನ ಪ್ರಮಾಣಪತ್ರ ನೀಡಿರುವುದು ಸೇರಿದಂತೆ ಹಲವು ದೂರುಗಳು ಸಾರ್ವಜನಿಕರಿಂದ ಲೋಕಾಯುಕ್ತ ಕಚೇರಿಗೆ ನಿರಂತರವಾಗಿ ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಕೋಲಾರ ಲೋಕಾಯುಕ್ತ ಎಸ್‌ಪಿ ಆಂಥೋನಿ ಜಾನ್ ಅವರ ಮಾರ್ಗದರ್ಶನದಲ್ಲಿ, ಪಿಐ ಆಂಜಿನಪ್ಪ ನೇತೃತ್ವದ ತಂಡ ನಗರಸಭೆ ಆರೋಗ್ಯ ಶಾಖೆಯ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಈ ಸಂಬಂಧ ತನಿಖೆ ಮುಂದುವರಿದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
