ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಸಿನಿಮಾ (Ramayana Movie) ದಿನದಿಂದ ದಿನಕ್ಕೆ ಭಾರಿ ಕುತೂಹಲ ಮೂಡಿಸುತ್ತಿದೆ. ಈಗ ಚಿತ್ರತಂಡ ಭರ್ಜರಿ ಟ್ರೇಲರ್ ಲಾಂಚ್ ಮಾಡಲು ರೆಡಿಯಾಗಿದೆ. ಜುಲೈ 24ರಂದು ಚಿತ್ರದ ಅದ್ದೂರಿ ಟ್ರೇಲರ್ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ಕಾಮಿಕ್ ಕಾನ್ ಈವೆಂಟ್ ಅಟೆಂಡ್ ಮಾಡಲು ಯಶ್ ಹಾಗೂ ರಣಬೀರ್ ಕಪೂರ್ ತೆರಳಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಮುಂಬೈನಿಂದ ಹೊರಟ ಸ್ಟಾರ್ ನಟರು
ಬುಧವಾರ (ಜುಲೈ 22) ಮುಂಜಾನೆ ರಣಬೀರ್ ಕಪೂರ್ ಮತ್ತು ಯಶ್ ಏರ್‌ಪೋರ್ಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇವರಿಬ್ಬರು ಸ್ಟಾರ್ ನಟರು ಕ್ಯಾಲಿಫೋರ್ನಿಯಾಗೆ ತೆರಳುತ್ತಿದ್ದಾರೆ. ಅಲ್ಲಿ ನಡೆಯಲಿರುವ ಪ್ರತಿಷ್ಠಿತ ‘ಸ್ಯಾನ್ ಡಿಯಾಗೋ ಕಾಮಿಕ್ ಕಾನ್’ ಕಾರ್ಯಕ್ರಮದಲ್ಲಿ ಇವರು ಭಾಗವಹಿಸಲಿದ್ದಾರೆ. ಟ್ರೇಲರ್ ರಿಲೀಸ್ ಆಗುವ ಮುನ್ನವೇ ಈ ವೇದಿಕೆಯಲ್ಲಿ ಸಿನಿಮಾದ ದೃಶ್ಯಗಳನ್ನು ಪ್ರದರ್ಶನ ಮಾಡಲಾಗುತ್ತದೆ.
. @TheNameIsYash Off to San Diego for Comic-con 🔥#Ramayana #ToxicTheMovie #Yash pic.twitter.com/QHmczdjrtd
— 𝗦𝗵𝗿𝗲𝘆𝗶 ᵀᵒˣᶦᶜ ²⁶⁻⁰⁸⁻²⁶ (@NameIsShreyash) July 22, 2026
ಬಿಗ್ ಸ್ಟೇಜ್‌ನಲ್ಲಿ ‘ರಾಮಾಯಣ’ ಗ್ಲಿಂಪ್ಸ್
ನಟರ ಜೊತೆಗೆ ಚಿತ್ರದ ನಿರ್ದೇಶಕ ನಿತೇಶ್ ತಿವಾರಿ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಕೂಡ ಈ ಕಾರ್ಯಕ್ರಮದಲ್ಲಿ ಜಂಟಿಯಾಗಲಿದ್ದಾರೆ. ಜುಲೈ 23ರಂದು ಅಲ್ಲಿನ ಬಾಲ್‌ರೂಮ್ 20ರಲ್ಲಿ ರಾಮಾಯಣ ಚಿತ್ರದ ಪ್ಯಾನಲ್ ಡಿಸ್ಕಷನ್ ನಡೆಯಲಿದೆ. ಇದು ಬರೋಬ್ಬರಿ 4,800 ಆಸನಗಳ ಸಾಮರ್ಥ್ಯ ಹೊಂದಿರುವ ಬೃಹತ್ ವೇದಿಕೆಯಾಗಿದೆ.ಇಲ್ಲಿ ಭಾಗವಹಿಸುವ ಪ್ರೇಕ್ಷಕರಿಗೆ ಸಿನಿಮಾದ ಮೊದಲ ಝಲಕ್ ನೋಡುವ ಸುವರ್ಣಾವಕಾಶ ಸಿಗಲಿದೆ. ಈ ವರ್ಷದ ಕಾಮಿಕ್ ಕಾನ್‌ನಲ್ಲಿ ಭಾರತದ ಪರವಾಗಿ ನಡೆಯುತ್ತಿರುವ ಅತಿ ದೊಡ್ಡ ಪ್ರೆಸೆಂಟೇಷನ್ ಇದಾಗಿದೆ.
ಇದನ್ನೂ ಓದಿ: ಜಟಾಯು ಪಾತ್ರಕ್ಕೆ ಅನುಪಮ್ ಖೇರ್ ಎಂಟ್ರಿ; ಇಲ್ಲಿದೆ ‘ರಾಮಾಯಣ’ ಕಲಾವಿದರ ಫುಲ್ ಲಿಸ್ಟ್
ದೀಪಾವಳಿಗೆ ಸಿನಿಮಾ ರಿಲೀಸ್
‘ರಾಮಾಯಣ’ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದೆ. ಯಶ್, ರಣಬೀರ್ ಕಪೂರ್, ಸಾಯಿ ಪಲ್ಲವಿ, ಸನ್ನಿ ಡಿಯೋಲ್, ರಕುಲ್ ಪ್ರೀತ್ ಸಿಂಗ್, ಕಾಜಲ್ ಅಗರ್ವಾಲ್, ರವಿ ದುಬೆ ಮತ್ತು ಕುನಾಲ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಸಂಸ್ಥೆಗಳು ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿವೆ. ಆಸ್ಕರ್ ಪ್ರಶಸ್ತಿ ವಿಜೇತ ವಿಎಫ್‌ಎಕ್ಸ್ ಸಂಸ್ಥೆ ‘ಡಿಎನ್‌ಇಜಿ’ ಈ ಚಿತ್ರಕ್ಕೆ ಗ್ರಾಫಿಕ್ಸ್ ಕೆಲಸಗಳನ್ನು ಮಾಡುತ್ತಿದೆ. 2026ರ ದೀಪಾವಳಿ ಹಬ್ಬಕ್ಕೆ ಸಿನಿಮಾ ಥಿಯೇಟರ್‌ಗಳಿಗೆ ಬರಲಿದೆ.
ಪ್ರಶ್ನೆ: ರಾಮಾಯಣ ರಿಲೀಸ್ ಯಾವಾಗ?
ಉತ್ತರ: ದೀಪಾವಳಿ
ಪ್ರಶ್ನೆ: ಯಶ್ ಪಾತ್ರವೇನು?
ಉತ್ತರ: ರಾವಣನ ಪಾತ್ರ
ಪ್ರಶ್ನೆ: ರಾಮಾಯಣ ಬಜೆಟ್ ಎಷ್ಟು
ಉತ್ತರ: 4000 ಕೋಟಿ ರೂಪಾಯಿ