ಬೆಂಗಳೂರು, ಜೂನ್ 24: ಬೆಂಗಳೂರಿನ ನಮ್ಮ ಮೆಟ್ರೋ ಸಿಬ್ಬಂದಿ ಕನ್ನಡ ಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಾಹನವೊಂದಕ್ಕೆ ‘ಕರೆಂಟ್ ಕಲೆಕ್ಟರ್ ಶೂ ಕ್ಯಾಪ್’ ಕಟ್ಟಲು ಕನ್ನಡದ ಬಾವುಟವನ್ನು ಬಳಸಲಾಗಿದ್ದು, ಈ ಘಟನೆ ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮಂಗಳವಾರ ತಡರಾತ್ರಿ ಕಬ್ಬನ್ ಪಾರ್ಕ್‌ನಲ್ಲಿ ಅಳವಡಿಕೆಗೆ ತಂದಿದ್ದ ಕರೆಂಟ್ ಕಲೆಕ್ಟರ್ ಶೂ ಕ್ಯಾಪ್ ಅನ್ನು ಸಾಗಿಸಲು ಕನ್ನಡ ಬಾವುಟದಿಂದ ಕಟ್ಟಲಾಗಿತ್ತು. ಇದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಕನ್ನಡ ಧ್ವಜಕ್ಕೆ ಮಾಡಿದ ಅಪಮಾನ ಎಂದಿದ್ದಾರೆ. ಮೆಟ್ರೋ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
