ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ! ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ! ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು, ಏಪ್ರಿಲ್ 03: ನಗರದ ಕಬ್ಬನ್ ಪಾರ್ಕ್​ನಲ್ಲಿ (Cubbon park) ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂದು ತಿಳಿದು ಬಂದಿಲ್ಲ. ಸಧ್ಯಕ್ಕೆ ಕಬ್ಬನ್ ಪಾರ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಹಿಂದಿನ ದಿನವೇ ಕಾಣೆಯಾಗಿದ್ದ ವ್ಯಕ್ತಿ

ಗುರುವಾರದಿಂದಲೇ ಕಾಣೆಯಾಗಿದ್ದ ಕಬ್ಬನ್ ಪೇಟೆ ಸುರೇಶ್, ಮನೆಗೆ ಮರಳಿರಲಿಲ್ಲ. ಈ ಬಗ್ಗೆ ಹೆಚ್​ಎಸ್ಆರ್ ಪೊಲೀಸ್ ಠಾಣೆಗೆ ಆತನ ಕುಟುಂಬಸ್ಥರು ದೂರು ನೀಡಿದ್ದರು. ಇಂದು ಬೆಳಗ್ಗೆ ಪಾರ್ಕ್‌ನ ಮರೊಂದಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಕಬ್ಬನ್ ಪಾರ್ಕ್​ ಪೊಲೀಸರು, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮೃತನ ಜೇಬಿನಲ್ಲಿ ಐಡಿ ಕಾರ್ಡ್​ ಲಭಿಸಿದ್ದು, ಆತ ಬೆಂಗಳೂರಿನ ಎಸ್​ಪಿ ರೋಡ್​ನಲ್ಲಿರುವ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಡೆತ್​ನೋಟ್ ಸಿಕ್ಕಿಲ್ಲ

ಐಡಿ ಕಾರ್ಡ್​ ಹೊರತುಪಡಿಸಿ ಮೃತನ ಬಳಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ಯಾವುದೇ ಡೆತ್​ನೋಟ್ ಲಭಿಸಿಲ್ಲವೆಂದು ಪೊಲೀಸರು ಹೇಳಿದ್ದಾರೆ. ನಂತರ ಆತನ ಕುಟುಂಬಕ್ಕೆ ಮಾಹಿತಿ ತಿಳಿಸಿದ ಅಧಿಕಾರಿಗಳು, ಘಟನೆ ಸಂಬಂಧ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *