ಕರ್ನಾಟಕದಲ್ಲಿ ಎಬೋಲಾ ಭೀತಿ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್ – Kannada News | Karnataka Health department guidelines: International Travelers note the latest advisory regarding Ebola Disease

ಬೆಂಗಳೂರು, (ಮೇ 22): ಆಫ್ರಿಕಾದಲ್ಲಿ ಎಬೋಲಾ ವೈರಸ್ (Ebola Disease) ಹರಡುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಆರೋಗ್ಯ ಇಲಾಖೆಯು (Karnataka Health department) ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆ. ಭಾರತದಲ್ಲಿ ಇದುವರೆಗೆ ಎಬೋಲಾ ಪ್ರಕರಣ ಕಂಡುಬಂದಿಲ್ಲವಾದರೂ ಕರ್ನಾಟಕದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೌದು…ಎಬೋಲಾ ವೈರಸ್ ಹರಡದಂತೆ ತಡೆಯಲು ರಾಜ್ಯ ಆರೋಗ್ಯ ಇಲಾಖೆ ಇಂದು (ಮೇ 22) ಮಾರ್ಗಸೂಚಿ (Ebola guidelines) ಪ್ರಕಟಿಸಿದ್ದು, ಎಬೋಲಾ ಪೀಡಿತ ದೇಶಗಳಿಂದ ಬೆಂಗಳೂರಿಗೆ ಬರುವಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಕ್ವಾರಂಟೈನ್ ಹಾಗೂ ರೋಗಲಕ್ಷಣ ಕಂಡುಬಂದ್ರೆ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ವರದಿ ವರದಿಮಾಡಿಕೊಳ್ಳಲು ಸೂಚಚಿಸಲಾಗಿದೆ.

ಮುಖ್ಯಾಂಶಗಳು

  • ಎಬೋಲಾ ಭೀತಿ ಹಿನ್ನೆಲೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ
  • ಎಬೋಲಾ ವೈರಸ್​ಗೆ ರಾಜ್ಯದಲ್ಲಿ ಕ್ವಾರಂಟೈನ್ & ಐಸೋಲೇಷನ್
  • ಚಿಕಿತ್ಸೆಗೆ ಆಸ್ಪತ್ರೆಗಳನ್ನು ಗುರುತಿಸಿದ ರಾಜ್ಯ ಆರೋಗ್ಯ ಇಲಾಖೆ
  • ಎಬೋಲಾ ಸೋಂಕಿತ ರಾಷ್ಟ್ರಗಳಿಂದ ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

ಎಬೋಲಾ ಲಕ್ಷಣಗಳು

  • ತೀವ್ರ ಜ್ವರ ಮತ್ತು ತಲೆನೋವು.
  • ಸ್ನಾಯು ನೋವು ಮತ್ತು ಗಂಟಲು ನೋವು
  • ವಾಂತಿ, ಅತಿಸಾರ ಮತ್ತು ಹೊಟ್ಟೆ ನೋವು.
  • ದದ್ದುಗಳು ಹಾಗೂ ಕಣ್ಣು ಕೆಂಪಾಗುವುದು.

ಸೋಂಕಿತ ವ್ಯಕ್ತಿಯ ರಕ್ತ, ಅಂಗಾಂಗಗಳು ಅಥವಾ ದೇಹದ ದ್ರವಗಳೊಂದಿಗೆ ನೇರ ಸಂಪರ್ಕ ಹೊಂದುವುದರಿಂದ ಅಥವಾ ಕಲುಷಿತಗೊಂಡ ಬಟ್ಟೆ, ಹಾಸಿಗೆ ಮತ್ತು ಸಿರಿಂಜ್‌ಗಳ ಮೂಲಕ ಈ ರೋಗ ಹರಡುತ್ತದೆ. ಆರೋಗ್ಯ ಸಿಬ್ಬಂದಿ ಮತ್ತು ರೋಗಿಯ ಕುಟುಂಬಸ್ಥರಿಗೆ ಸೋಂಕಿನ ಅಪಾಯ ಹೆಚ್ಚಿರುತ್ತದೆ.

ಚಿಕಿತ್ಸೆಗೆ ಆಸ್ಪತ್ರೆ ಕಾಯ್ದಿರಿಸಿದ ಸರ್ಕಾರ

ಸೋಂಕು ತಡೆಗಟ್ಟಲು ರಾಜ್ಯ ಸರ್ಕಾರವು ಬೆಂಗಳೂರು ಮತ್ತು ಮಂಗಳೂರಿನಲ್ಲಿ ವಿಶೇಷ ವ್ಯವಸ್ಥೆ ಮಾಡಿದೆ. ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆ (RGICD)ಯನ್ನು ಐಸೋಲೇಷನ್ ಕೇಂದ್ರವಾಗಿ ಮತ್ತು ಎಪಿಡೆಮಿಕ್ ಡಿಸೀಸ್ ಆಸ್ಪತ್ರೆಯನ್ನು ಕ್ವಾರಂಟೈನ್ ಕೇಂದ್ರವಾಗಿ ನಿಗದಿಪಡಿಸಲಾಗಿದೆ. ಇನ್ನು ಮಂಗಳೂರಿನಲ್ಲಿ ಶ್ರೀನಿವಾಸ್ ಪೋರ್ಟ್ ಆಸ್ಪತ್ರೆ (NMPA) ಮತ್ತು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ.

ವಿದೇಶದಿಂದ ಬರುವವರಿಗೆ ವಿಮಾನ ನಿಲ್ದಾಣಗಳಲ್ಲೇ ತಪಾಸಣೆ ಮಾಡಲಾಗುತ್ತಿದ್ದು, ಶಂಕಾಸ್ಪದ ಪ್ರಕರಣಗಳ ಮಾದರಿಗಳನ್ನು ಬೆಂಗಳೂರಿನ ಎನ್.ಐ.ವಿ (NIV) ಮೂಲಕ ಪುಣೆಯ ಮುಖ್ಯ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಲಾಗುತ್ತದೆ.

ಮುಂಜಾಗ್ರತಾ ಕ್ರಮ

ಪ್ರತ್ಯೇಕ ಕ್ವಾರಂಟೈನ್, ಐಸೋಲೇಷನ್, ರೆಫರಲ್ ಌಂಬುಲೆನ್ಸ್ ವ್ಯವಸ್ಥೆ, ಪಿಪಿಇ ಕಿಟ್​ಗಳು, ಅಗತ್ಯ ಔಷಧ ಸಂಗ್ರಹ. ಱಪಿಡ್ ರೆಸ್ಪಾನ್ಸ್ ತಂಡಗಳನ್ನು ಸಕ್ರಿಯಗೊಳಿಸುವುದು, ಚಿಕಿತ್ಸೆ ನೀಡಲು ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡುವುದು ಸೇರಿದಂತೆ ಸೋಂಕು ಹರದಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮಕೈಗೊಂಡಿದೆ.

ಪ್ರಯಾಣಿಕರಿಗೆ ಸೂಚನೆ

ಸಾರ್ವಜನಿಕರು ಅನಗತ್ಯವಾಗಿ ಆತಂಕಕ್ಕೊಳಗಾಗಬಾರದು ಮತ್ತು ಕೇವಲ ಅಧಿಕೃತ ಮಾಹಿತಿಗಳನ್ನು ಮಾತ್ರ ನಂಬಬೇಕು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ. ಎಬೋಲಾ ಪೀಡಿತ ದೇಶಗಳಿಂದ (DRC ಮತ್ತು ಉಗಾಂಡಾ) ಭಾರತಕ್ಕೆ ಮರಳಿದ ಪ್ರಯಾಣಿಕರು ಕನಿಷ್ಠ 21 ದಿನಗಳ ಕಾಲ ಆರೋಗ್ಯ ಇಲಾಖೆಯ ಮೇಲ್ವಿಚಾರಣೆಯಲ್ಲಿ ಇರಬೇಕು. ಯಾವುದೇ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ವರದಿ ಮಾಡಬೇಕು. ತ್ವರಿತ ಪ್ರತಿಕ್ರಿಯೆ ತಂಡಗಳನ್ನು (RRT) ಈಗಾಗಲೇ ಸಜ್ಜುಗೊಳಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *