ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್: ಸರ್ಕಾರದ ನಡೆಗೆ ಬಿಜೆಪಿ ರಾಜ್ಯಸಭೆ ಸದಸ್ಯ ಮೆಚ್ಚುಗೆ

ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್: ಸರ್ಕಾರದ ನಡೆಗೆ ಬಿಜೆಪಿ ರಾಜ್ಯಸಭೆ ಸದಸ್ಯ ಮೆಚ್ಚುಗೆ

ಬೆಂಗಳೂರು, ಮಾರ್ಚ್​​ 06: ಕರ್ನಾಟಕದ ಇತಿಹಾಸದಲ್ಲೇ ಐತಿಹಾಸಿಕ 17ನೇ ಬಜೆಟ್ ಮಂಡಿಸುವ ಮೂಲಕ ಸಿಎಂ ಸಿದ್ದರಾಮಯ್ಯ ದಾಖಲೆ ನಿರ್ಮಿಸಿದ್ದಾರೆ. ರೈತರು, ಮಹಿಳೆಯರು ಸೇರಿದಂತೆ ಮಕ್ಕಳಿಗೂ ಆದ್ಯತೆ ನೀಡಲಾಗಿದೆ. ಅದರಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬ್ಯಾನ್​ (Social Media Ban) ಮಾಡಲಾಗಿದೆ. ಆ ಮೂಲಕ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ಈ ನಡೆಯನ್ನು ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ (Lahar Singh Siroya) ಸ್ವಾಗತಿಸಿದ್ದಾರೆ.

ಸರ್ಕಾರದ ನಡೆಗೆ ಲಹರ್ ಸಿಂಗ್ ಸಿರೋಯಾ ಮೆಚ್ಚುಗೆ

ಈ ಬಗ್ಗೆ ಟ್ವೀಟ್​ ಮಾಡಿರುವ ಬಿಜೆಪಿ ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ, ‘ಕರ್ನಾಟಕ ಸರ್ಕಾರವು 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿರುವುದನ್ನು ನಾನು ಸ್ವಾಗತಿಸುತ್ತೇನೆ. ಈ ವಿಷಯವನ್ನು ನಾನು ಸಂಸತ್ತಿನಲ್ಲಿ ವಿಶೇಷ ಪ್ರಸ್ತಾಪದ ಮೂಲಕ ಧ್ವನಿ ಎತ್ತಿದ್ದೆ’ ಎಂದು ಹೇಳಿದ್ದಾರೆ.

ಲಹರ್ ಸಿಂಗ್ ಸಿರೋಯಾ ಟ್ವೀಟ್​​

‘ಇತ್ತೀಚೆಗೆ ನಡೆದ ಎಐ ಶೃಂಗಸಭೆಯಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಮುಂದಿನ ಯುವ ಪೀಳಿಗೆಯ ಹಿತಾಸಕ್ತಿಯನ್ನು ಭದ್ರಪಡಿಸುವ ನಿಟ್ಟಿನಲ್ಲಿ ಮಾತನಾಡಿದ್ದರು’ ಎಂದರು.

ಇದನ್ನೂ ಓದಿ: Karnataka Budget 2026:16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ! ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ

‘ಮಕ್ಕಳಲ್ಲಿ ಸ್ಮಾರ್ಟ್‌ಫೋನ್ ಬಳಕೆಗೆ ಮಿತಿಗಳನ್ನು ವಿಧಿಸುವ ಅಗತ್ಯವನ್ನೂ ನನ್ನ ಸಂಸತ್ತಿನ ಭಾಷಣದಲ್ಲಿ ಪ್ರಸ್ತಾಪಿಸಿದ್ದೆ. ಈ ವಿಷಯವನ್ನೂ ಗಂಭೀರವಾಗಿ ಪರಿಗಣಿಸಲಾಗುತ್ತದೆ ಎಂಬ ನಿರೀಕ್ಷೆ ನನಗಿದೆ. ಮಕ್ಕಳಿಗೆ ಸಾಮಾಜಿಕ ಮಾಧ್ಯಮವನ್ನು ನಿಷೇಧಿಸುವ ವಿಷಯದಲ್ಲಿ ರಾಜ್ಯ ಸರ್ಕಾರವು ತನ್ನ ನಿರ್ಧಾರವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಸ್ಪಷ್ಟ ಹಾಗೂ ಪರಿಣಾಮಕಾರಿ ನಿಯಮಗಳನ್ನು ರೂಪಿಸಬೇಕಾಗಿದೆ’ ಎಂದು ಲಹರ್ ಸಿಂಗ್ ಸಿರೋಯಾ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *