ಕರ್ನಾಟಕದ 3 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಭಾಗ್ಯ!
ಬೆಂಗಳೂರು, ಫೆಬ್ರುವರಿ 03: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಡಿಜಿಟಲ್ ಶಿಕ್ಷಣ ವಿಸ್ತಾರಗೊಳಿಸಲು ಸಮಗ್ರ ಶಿಕ್ಷಣ ಕರ್ನಾಟಕದಡಿ ಸ್ಮಾರ್ಟ್ ಕ್ಲಾಸ್ (Smart Class) ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಯೋಜನಾ ಅನುಮೋದನ ಮಂಡಳಿಯ ತೀರ್ಮಾನದಂತೆ, 3862 ಶಾಲೆಗಳಲ್ಲಿ 9154.80 ಲಕ್ಷ ರೂ. ವೆಚ್ಚದಲ್ಲಿ ಸ್ಮಾರ್ಟ್ ಕ್ಲಾಸ್ ರೂಮ್ ಯೋಜನೆ ಅನುಷ್ಠಾನಗೊಳ್ಳಲಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಕಂಪ್ಯೂಟರ್ ಆಧಾರಿತ ಶಿಕ್ಷಣವನ್ನು ಬಲಪಡಿಸುವ ಉದ್ದೇಶದಿಂದ 5,000 ಶಾಲೆಗಳಲ್ಲಿ ಕಂಪ್ಯೂಟರ್ ಪ್ರಯೋಗಾಲಯಗಳು ಹಾಗೂ ಸ್ಮಾರ್ಟ್ ಕ್ಲಾಸ್ಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹಿಂದೆಯೂ ಹೇಳಿಕೆ ನೀಡಿದ್ದರು. ಇದೀಗ ಹಿರಿಯ ಪ್ರಾಥಮಿಕ ಶಾಲೆಗಳಿಗೆ 3 ಸಾವಿರ ಲಕ್ಷ ರೂ. ಗೂ ಹೆಚ್ಚು ಹಣ ಮೀಸಲಿಡಲಾಗಿದ್ದು, ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 4 ಸಾವಿರ ಲಕ್ಷ ರೂ. ಮೀಸಲಿಡಲಾಗಿದೆ ಎಂದು ಹೇಳಲಾಗಿದೆ. ಇದರ ಮೂಲಕ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಡಿಜಿಟಲ್ ಶಿಕ್ಷಣ ಸೌಲಭ್ಯ ವಿಸ್ತಾರಗೊಳ್ಳಲಿದೆ ಮತ್ತು ಶಾಲಾ ಶಿಕ್ಷಣ ಗುಣಮಟ್ಟದಲ್ಲಿ ಸುಧಾರಣೆ ಕಾಣಬಹುದಾಗಿದೆ.
ಯಾವೆಲ್ಲಾ ವಿಭಾಗಗಳಿಗೆ ಎಷ್ಟೆಷ್ಟು ಅನುದಾನ ಮೀಸಲು
- 1631 ಹಿರಿಯ ಪ್ರಾಥಮಿಕ ಶಾಲೆಗಳಿಗೆ 3914.40 ಲಕ್ಷ ರೂಗಳು ಮೀಸಲು
- 95 ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯಗಳಿಗೆ 114 .00 ಲಕ್ಷ ರೂ ಮೀಸಲು
- 1326 ಹಿರಿಯ ಪ್ರಾಥಮಿಕ ಶಾಲೆಗಳು ಹಾಗೂ 651 ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 4744.80 ಲಕ್ಷ ಮೀಸಲು
- 4. 159 ಪ್ರೌಢ/ಉನ್ನತ ಪ್ರೌಢ ಶಾಲೆಗಳಿಗೆ 381.6 ಲಕ್ಷ ಮೀಸಲು
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.