Headlines

ಕರ್ನಾಟಕ ಪ್ರವಾಸಿಗರಿಗೆ ಸಿಗಲಿದೆ ಹೈಟೆಕ್ ಡಿಜಿಟಲ್ ಸೌಲಭ್ಯ!; ಇನ್ಮುಂದೆ ಒಂದೇ ಕ್ಲಿಕ್‌ನಲ್ಲಿ ಸಿಗಲಿದ್ದಾರೆ ‘ನಮ್ಮ ಗೈಡ್’ – Kannada News | Namma Guide App: Karnataka’s New Online Platform for Tourists and Certified Guides

ಬೆಂಗಳೂರು, ಜೂ.23: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಮತ್ತು ದೇಶ-ವಿದೇಶಗಳ ಪ್ರವಾಸಿಗರಿಗೆ ವಿಶ್ವದರ್ಜೆಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ಸೂಚನೆ ಮೇರೆಗೆ, ಪ್ರವಾಸೋದ್ಯಮ ಇಲಾಖೆಯು ರಾಜ್ಯದ ಇತಿಹಾಸ ಮತ್ತು ಸಂಸ್ಕೃತಿಯನ್ನು ಪ್ರವಾಸಿಗರಿಗೆ ಪರಿಣಾಮಕಾರಿಯಾಗಿ ತಲುಪಿಸಲು ‘ನಮ್ಮ ಗೈಡ್’ (Namma Guide) ಎಂಬ ಅತ್ಯಾಧುನಿಕ ಆನ್‌ಲೈನ್ ವೇದಿಕೆಯನ್ನು ಸಿದ್ಧಪಡಿಸಲು ಗಂಭೀರ ಚಿಂತನೆ ನಡೆಸಿದೆ.

ಪ್ರಸ್ತುತ ಅಭಿವೃದ್ಧಿ ಹೊಂದಿದ ವಿದೇಶಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ತಮಗೆ ಬೇಕಾದ ಗೈಡ್‌ಗಳನ್ನು ಆನ್‌ಲೈನ್ ಮೂಲಕವೇ ಮುಂಚಿತವಾಗಿ ಕಾಯ್ದಿರಿಸುವ ಸುಧಾರಿತ ವ್ಯವಸ್ಥೆಗಳಿವೆ. ಇದೇ ಮಾದರಿಯನ್ನು ಕರ್ನಾಟಕದಲ್ಲೂ ಅಳವಡಿಸಿಕೊಳ್ಳಲು ಇಲಾಖೆ ಸಜ್ಜಾಗಿದ್ದು, ಇದಕ್ಕಾಗಿ ಪ್ರತ್ಯೇಕ ವೆಬ್‌ಸೈಟ್‌ ಹಾಗೂ ಮೊಬೈಲ್ ಆ್ಯಪ್‌ ಅನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ಡಿಜಿಟಲ್ ಪ್ಲಾಟ್‌ಫಾರ್ಮ್ ಮೂಲಕ ಪ್ರವಾಸಿಗರು ತಮಗೆ ಬೇಕಾದ ಅಧಿಕೃತ ಸ್ಥಳೀಯ ಗೈಡ್‌ಗಳನ್ನು ಸುಲಭವಾಗಿ ಸಂಪರ್ಕಿಸಿ, ಪ್ರವಾಸಿ ತಾಣಗಳ ಇತಿಹಾಸ ಮತ್ತು ಮಹತ್ವವನ್ನು ನಿಖರವಾಗಿ ಅರಿತುಕೊಳ್ಳಲು ಸಾಧ್ಯವಾಗುತ್ತದೆ.

ಈ ನೂತನ ತಂತ್ರಜ್ಞಾನ ಆಧಾರಿತ ಯೋಜನೆಯಿಂದಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ಈಗಾಗಲೇ ಅಧಿಕೃತವಾಗಿ ನೋಂದಣಿಯಾಗಿರುವ ನೂರಾರು ಸ್ಥಳೀಯ ಗೈಡ್‌ಗಳಿಗೆ ನಿರಂತರವಾಗಿ ಉದ್ಯೋಗಾವಕಾಶಗಳು ದೊರೆಯಲಿವೆ. ಇದರೊಂದಿಗೆ ಪ್ರವಾಸಿ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡುವಲ್ಲಿ ಹಾಗೂ ಐತಿಹಾಸಿಕ ಸ್ಮಾರಕಗಳ ಸಮರ್ಪಕ ನಿರ್ವಹಣೆಯಲ್ಲಿ ಈ ಗೈಡ್‌ಗಳು ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡಲು ಈ ಆ್ಯಪ್ ನೆರವಾಗಲಿದೆ.

ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯರಿಗಿಲ್ಲ ರಕ್ಷಣೆ?; ಸಿಬ್ಬಂದಿ ಸೋಗಿನಲ್ಲಿ ಬಂದು ವಿಕೃತಿ ಮೆರೆದ ಕಿರಾತಕನಿಗೆ ಬಿತ್ತು ಧರ್ಮದೇಟು

‘ನಮ್ಮ ಗೈಡ್’ ಯೋಜನೆಯನ್ನು ಅತ್ಯಂತ ವೇಗವಾಗಿ ಮತ್ತು ಯಶಸ್ವಿಯಾಗಿ ಸಾಕಾರಗೊಳಿಸಲು ಇಲಾಖೆಯು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಅತ್ಯಾಧುನಿಕ ವೆಬ್‌ಸೈಟ್ ಹಾಗೂ ಆ್ಯಪ್ ವಿನ್ಯಾಸಗೊಳಿಸಲು ರಾಜ್ಯದಲ್ಲಿರುವ ಪ್ರಮುಖ ನವೋದ್ಯಮಗಳು (Startups) ಸೇರಿದಂತೆ ತಂತ್ರಜ್ಞಾನ ವಲಯದಲ್ಲಿ ಆಸಕ್ತಿ ಹೊಂದಿರುವ ನುರಿತ ಐಟಿ ಸಂಸ್ಥೆಗಳಿಗೆ ಆಹ್ವಾನ ನೀಡಲು ಪ್ರವಾಸೋದ್ಯಮ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 4:21 pm, Tue, 23 June 26

Source link

Leave a Reply

Your email address will not be published. Required fields are marked *