ಬೆಂಗಳೂರು, ಜುಲೈ 30: ಕಾವೇರಿ ನೀರು ಹಂಚಿಕೆ ವಿವಾದ ಕರ್ನಾಟಕದಲ್ಲಿ ಮತ್ತೊಮ್ಮೆ ತೀವ್ರ ಸ್ವರೂಪ ಪಡೆದುಕೊಂಡಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA)ಹೊರಡಿಸಿರುವ ಆದೇಶದ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ರೈತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆಗಿಳಿದಿವೆ. ಏತನ್ಮಧ್ಯೆ ಇಂದು ಮಧ್ಯಾಹ್ನ 2:30ಕ್ಕೆ ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತುರ್ತು ಸಭೆ ನಡೆಯಲಿದೆ. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು ಮತ್ತು ಪಾಂಡಿಚೇರಿ ಸದಸ್ಯರು ಭಾಗಿಯಾಗಲಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ತಮಿಳುನಾಡಿಗೆ ನೀರು ಹರಿಸುವ ಆದೇಶದ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ. ಕರ್ನಾಟಕ ಸರ್ಕಾರವು ಸಿಡಬ್ಲ್ಯೂಎಂಎಗೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದು, ಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಬಲ ವಾದ ಮಂಡನೆಗೆ ಸೂಚಿಸಿದ್ದಾರೆ.
ಏತನ್ಮಧ್ಯೆ, ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಕ್ಕೆ ಕನ್ನಡ ಸಂಘಟನೆಗಳಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. ಕಾವೇರಿ ನೀರಿಗಾಗಿ ರಾಜ್ಯವ್ಯಾಪಿ ಕರ್ನಾಟಕ ಬಂದ್ ಕರೆಯುವ ಸಾಧ್ಯತೆಗಳಿದ್ದು, ಶುಕ್ರವಾರ ಬೆಂಗಳೂರಿನ ವುಡ್‌ಲ್ಯಾಂಡ್ ಹೋಟೆಲ್‌ನಲ್ಲಿ ಸಂಘಟನೆಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಂದ್ ದಿನಾಂಕ ಮತ್ತು ಹೋರಾಟದ ರೂಪುರೇಷೆಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
