ಬೆಂಗಳೂರಿನಿಂದ ತಮಿಳುನಾಡಿಗೆ ತೆರಳುವ ಬಸ್ಗಳಿಗೆ ತಾತ್ಕಾಲಿಕ ತಡೆImage Credit source: Tv9 Kannada
ಬೆಂಗಳೂರು, ಆಗಸ್ಟ್ 13: ಕಾವೇರಿ ಜಲ ವಿವಾದ ಸಂಬಂಧ ಇಂದು (ಆಗಸ್ಟ್ 13) ಕರ್ನಾಟಕ ಬಂದ್ಗೆ ಕರೆ ನೀಡಿರುವ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ಜನ ಜೀವನ, ವಾಹನಗಳ ಸಂಚಾರ ಎಂದಿನಂತೆ ಆರಂಭವಾಗಿದೆ. ಹೀಗಿದ್ದರೂ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರ ಸೂಚನೆ ಮೇರೆಗೆ ನಗರದಿಂದ ತಮಿಳುನಾಡಿಗೆ ಸಂಚರಿಸುವ ಬಸ್ಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ ತಮಿಳುನಾಡಿನ ಪ್ರಮುಖ ನಗರಗಳಾದ ಊಟಿ, ತಿರುವಣ್ಣಾಮಲೈ, ತಲ್ಲಕುರ್ಚಿ, ಸೇಲಂ, ವೇಲೂರು, ಕಲ್ಪಕಂ, ಕಾಂಜಿವರಂ, ವಂದಾವಾಸಿ, ತಿರುವಳ್ಳೂರು, ಉಳುಂದೂರು ಪೇಟೆ, ತಿರುಪ್ಪತ್ತೂರು, ಕಡಲೂರು, ತಿರುತ್ತಣಿ, ತಿಟ್ಟಕುಡಿ, ತಿರುಕ್ಕೋವಿಲೂರು, ಚಿದಂಬರಂ, ವಿರುತ್ತಾಚಲಂ ಸೇರಿ ಹಲವು ಊರುಗಳಿಗೆ ತೆರಳಬೇಕಿದ್ದ ಬಸ್ಗಖ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಸಹಜ ಸ್ಥಿತಿಯಲ್ಲಿರುವ ವಾಹನಗಳ ಸಂಚಾರ
ಉಳಿದಂತೆ ರಾಜ್ಯದ ವಿವಿಧೆಡೆ ಸಂಚರಿಸುವ ಬಸ್ಗಳ ಸಹಜ ಸ್ಥಿತಿಯಲ್ಲಿ ಆರಂಭವಾಗಿದ್ದು, ಮೈಸೂರು, ಟಿ.ನರಸೀಪುರ, ಹುಣಸೂರು, ರಾಮನಗರ, ಚನ್ನಪಟ್ಟಣ, ಮಂಡ್ಯ, ಶ್ರೀರಂಗಪಟ್ಟಣ, ಮದ್ದೂರು, ಮಡಿಕೇರಿ, ಕುಶಾಲ ನಗರ, ಮಂಗಳೂರು ಸೇರಿ ಹಲವು ಕಡೆಗೆ KSRTC ಬಸ್ಗಳು ಸಂಚಾರ ಆರಂಭಿಸಿವೆ.
ಇದನ್ನೂ ಓದಿ: ಇಂದು ಕರ್ನಾಟಕ ಬಂದ್; ಬೆಂಗಳೂರಲ್ಲಿ ಪೊಲೀಸರಿಂದ ಹೈ ಅಲರ್ಟ್
ಹೇಗಿದೆ ಏರ್ಪೋರ್ಟ್ ಬಳಿಯ ಸ್ಥಿತಿ?
ಇನ್ನು ಕೆಂಪೇಗೌಡ ಅಂತಾರಾಷ್ಟ್ರೀಯಾ ವಿಮಾನ ನಿಲ್ಥಾಣದಲ್ಲಿಯೂ ಎಂದಿನಂತೆ ಕ್ಯಾಬ್ಗಳ ಸಂಚಾರವಿದ್ದು, ಬಂದ್ ಹಿನ್ನೆಲೆ ಬೆಳಗ್ಗೆಯೇ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರ ಓಡಾಟ ಕಂಡುಬಂದಿದೆ. ಬಂದ್ನಿಂದ ಕ್ಯಾಬ್ಗಳು ಇರುತ್ತೋ? ಇಲ್ವೋ? ಎಂಬ ಆತಂಕದಲ್ಲಿಯೇ ಪ್ರಯಾಣಿಕರು ಆಗಮಿಸುತ್ತಿದ್ದಾರೆ. ಆದರೆ ಟರ್ಮಿನಲ್ 1 ಮತ್ತು 2ರಲ್ಲಿ ಎಂದಿನಂತೆ ಕ್ಯಾಬ್ ಸೇರಿದಂತೆ ಖಾಸಗಿ ವಾಹನಗಳ ಸಂಚಾರವಿದೆ. ಡ್ರಾಪ್ ಮತ್ತು ಪಿಕಪ್ಗಳಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೀಗಿದ್ದರೂ ಮುಂಜಾಗ್ರತಾ ಕ್ರಮವಾಗಿ ಏರ್ಪೋಟ್ ಆವರಣದಲ್ಲಿಯೂ ಪೊಲೀಸರು ಭದ್ರತೆ ಕೈಗೊಂಡಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On – 7:31 am, Thu, 13 August 26