ಕರ್ನಾಟಕ ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!

ಕರ್ನಾಟಕ ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!

ಹುಬ್ಬಳ್ಳಿ, ಏಪ್ರಿಲ್ 10: ಹಜರತ್ ನಿಜಾಮುದ್ದೀನ್‌ ಹಾಗೂ ಯಶವಂತಪುರ ಮಧ್ಯೆ ಸಂಚರಿಸುವ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ: 12650) ರೈಲಿನಲ್ಲಿ ಯುವಕರಿಬ್ಬರು ಬಹಿರಂಗವಾಗಿ ಗಾಂಜಾ ಸೇವನೆ ಮಾಡಿದ್ದಾರೆ. ರಾತ್ರಿ ಪ್ರಯಾಣದ ವೇಳೆ ಸಿಗರೇಟ್‌ನಲ್ಲಿ ಗಾಂಜಾ ಸೇರಿಸಿ ಸೇದುತ್ತಾ ಸಹಪ್ರಯಾಣಿಕರಿಗೆ ಕಿರಿಕಿರಿ ಉಂಟುಮಾಡಿದ್ದಾರೆ. ಸಾರ್ವಜನಿಕರ ಭಯವಿಲ್ಲದೆ ಅಟ್ಟಹಾಸ ಮೆರೆದ ಈ ಯುವಕರ ಕೃತ್ಯವನ್ನು ಪ್ರಯಾಣಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ವಿಡಿಯೋ ಈಗ ವೈರಲ್ ಆಗಿದೆ. ರೈಲ್ವೆ ಪೊಲೀಸರು ಇವರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *