ಕರ್ನಾಟಕ ಹವಾಮಾನ ವರದಿ: ಇಂದೂ ರಾಜ್ಯದೆಲ್ಲೆಡೆ ಒಣ ಹವೆ, ಮಂಜು ಕವಿದ ವಾತಾವರಣ – Kannada News | Bengaluru temperature: Dry weather all over the state, misty weather in Bengaluru

ಇಂದೂ ರಾಜ್ಯದೆಲ್ಲೆಡೆ ಒಣ ಹವೆ, ಮಂಜು ಕವಿದ ವಾತಾವರಣ

ಬೆಂಗಳೂರು, ಜನವರಿ 07: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣವಿದ್ದು, ಇಂದೂ ಸಹ ಅದೇ ಹವಾಮಾನ (Weather Forecast) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಇನ್ನೆರಡು ದಿನ ಇದೇ ಹವಾಮಾನವಿರಲಿದ್ದು, ನಂತರ ಲಘು ಮಳೆಯಾಗುವ ಸಾಧ್ಯತೆಯಿದೆ.

ಎಲ್ಲೆಲ್ಲಿ ಒಣಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಲಕ್ಷಣಗಳಿಲ್ಲದೆ ಒಣ ಹವೆಯ ವಾತಾವರಣವಿರಲಿದೆ.

ಇದೇ ವೇಳೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಒಣ ಹವೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಕಾಣಿಸಿಕೊಂಡಿರುವ ಒಣ ಹವೆಯ ವಾತಾವರಣ ಇಂದು ಸಹ ಮುಂದುವರಿಯಲಿದೆ.

ರಾಜಧಾನಿಯಲ್ಲಿ ಚಳಿ

ರಾಜಧಾನಿ ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣ ಕಂಡುಬರುತ್ತಿದೆ. ಇಂದು ನಗರದ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಬೆಚ್ಚಗಿನ ಉಡುಪು ಧರಿಸುವುದು ಹಾಗೂ ಬಿಸಿ ಆಹಾರ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *