Headlines

ಕರ್ನಾಟಕ ಹವಾಮಾನ ವರದಿ: ಚಳಿ ಮುಗಿಯುತ್ತಾ ಬಂತು, ಬೇಸಿಗೆ ಆರಂಭ ಆಗುವ ಮುನ್ಸೂಚನೆ – Kannada News | Bengaluru Weather Today: Fog, 30°C; Coastal Heat Alert and Karnataka Forecast

ಬೆಂಗಳೂರು, ಫೆ.5: ಬೆಂಗಳೂರಿನ ಸೇರಿದಂತೆ ರಾಜ್ಯದಲ್ಲಿ ಇಂದಿನ ವಾತಾವರಣ (Karnataka Weathe) ಹೇಗಿದೆ? ಯಾವೆಲ್ಲ ಜಿಲ್ಲೆಯ ಜನ ಎಚ್ಚರಿಕೆಯಿಂದ ಇರಬೇಕು ಎಂಬುದು ಇಲ್ಲಿದೆ ನೋಡಿ. ನಗರದಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜು ಮುಸುಕಿದ ವಾತಾವರಣವಿತ್ತು. ದಿನವಿಡೀ ಆಕಾಶವು ಭಾಗಶಃ ಮೋಡದಿಂದ ಕೂಡಿರುತ್ತದೆ. ಗರಿಷ್ಠ ತಾಪಮಾನ 30°C ಮತ್ತು ಕನಿಷ್ಠ ತಾಪಮಾನ 17°C ಆಸುಪಾಸಿನಲ್ಲಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೈಸೂರು ಮತ್ತು ಹಾಸನ ಭಾಗದಲ್ಲಿ ಹವಾಮಾನವು ತುಂಬಾ ಪ್ರಶಾಂತವಾಗಿದ್ದು, ಸಂಜೆಯ ವೇಳೆಗೆ ತಂಪಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಗರಿಷ್ಠ ತಾಪಮಾನವು 33°C ವರೆಗೆ ಏರಿಕೆಯಾಗುವ ಸಾಧ್ಯತೆಯಿದ್ದು, ಮಧ್ಯಾಹ್ನದ ಸಮಯದಲ್ಲಿ ಸೆಕೆ ಹೆಚ್ಚಿರಲಿದೆ. ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಮುಂಜಾನೆ ಚಳಿಯ ಅನುಭವವಾಗಲಿದೆ. ಗರಿಷ್ಠ ತಾಪಮಾನವು 31°C – 33°C ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ: ಬೆಂಗಳೂರಿಗರೇ ಗಮನಿಸಿ: ಫೆ.4 ರಿಂದ 9 ರವರೆಗೆ ಈ ಪ್ರದೇಶಗಳಲ್ಲಿ ಪ್ರತಿದಿನ 4 ಗಂಟೆಗಳ ಕಾಲ ವಿದ್ಯುತ್ ಕಡಿತ

ರಾಜ್ಯದ ಕೆಲವು ಪ್ರಮುಖ ನಗರಗಳ ಹವಾಮಾನ ಮಾಹಿತಿ ಇಲ್ಲಿದೆ:

ಉತ್ತರ ಕರ್ನಾಟಕ ಮತ್ತು ಬೆಂಗಳೂರಿನ ಸುತ್ತಮುತ್ತಲಿನ ಬಯಲು ಪ್ರದೇಶಗಳಲ್ಲಿ ಮುಂಜಾನೆ ದೃಷ್ಟಿಗೋಚರ ಕಡಿಮೆ ಇರಲಿದ್ದು, ವಾಹನ ಸವಾರರು ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ರಾಜ್ಯದ ಯಾವುದೇ ಭಾಗದಲ್ಲಿ ಸದ್ಯಕ್ಕೆ ಮಳೆಯ ಮುನ್ಸೂಚನೆ ಇಲ್ಲ. ಒಣಹವೆ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಫೆಬ್ರವರಿ ಮೊದಲ ವಾರ ಮುಗಿಯುತ್ತಿದ್ದಂತೆ ಹಗಲಿನ ತಾಪಮಾನವು ಕ್ರಮೇಣ ಏರಿಕೆಯಾಗುತ್ತಿದ್ದು, ಬೇಸಿಗೆ ಆರಂಭ ಆಗುವ ಮುನ್ಸೂಚನೆ ಸಿಗುತ್ತಿದೆ ಎಂದು ಹೇಳಲಾಗಿದೆ. ಇಂದಿನಿಂದ ಬೆಂಗಳೂರಿನ ಕೆಲವು ಭಾಗಗಳಲ್ಲಿ ವಿದ್ಯುತ್​​ ಕಡಿತವಾಗಲಿದೆ. 4 ಗಂಟೆಗಳ ಕಾಲ ವಿದ್ಯುತ್ ವ್ಯಯ್ಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ. ಆ ಕಾರಣದಿಂದ ಬೆಂಗಳೂರಿನಲ್ಲಿ ಇಂದು ಸೆಕೆಯಿಂದ ಕೂಡಿದ್ದರೆ ಮುನ್ನೆಚ್ಚರಿಕೆ ವಹಿಸುವಂತೆ ಹೇಳಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *