Headlines

ಕರ್ನಾಟಕ ಹವಾಮಾನ ವರದಿ: ಬೆಂಗಳೂರು, ತುಮಕೂರಿನಲ್ಲಿಂದು ಗಾಳಿ ಮಳೆ ಅಬ್ಬರ ಜೋರು! – Kannada News | Bengaluru temperature: Thundershowers in Bengaluru and most of the state, dry weather elsewhere

ಬೆಂಗಳೂರು, ತುಮಕೂರಿನಲ್ಲಿಂದು ಗಾಳಿ ಮಳೆ ಅಬ್ಬರ ಜೋರು!

ಬೆಂಗಳೂರು, ಮೇ 04: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಮಳೆರಾಯ (Karnataka Weather) ಮುಖ ತೋರಿಸಿದ್ದು, ಮೆಜೆಸ್ಟಿಕ್, ಕೆಆರ್ ಮಾರುಕಟ್ಟೆ, ಶಾಂತಿನಗರ, ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್, ನಂದಿನಿ ಲೇಔಟ್ ಸುತ್ತಮುತ್ತ ದಿಢೀರನೆ ಭಾರೀ ಮಳೆ ಸುರಿದಿದೆ. ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಮಳೆ

ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕರ್ನಾಟಕದ ಬೀದರ್, ಕಲ್ಬುರ್ಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದ್ದು, ಉಳಿದೆಡೆ ಶುಷ್ಕ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ 30-40 ಕಿ. ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ನೂ ಮೂರು ದಿನ ಗುಡುಗು, ಮಳೆಯಬ್ಬರ!

ಕರ್ನಾಟಕದ ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 05 ಮತ್ತು ಮೇ 7ರಂದು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ ಬೆಂಗಳೂರಿನಲ್ಲಿ ಬೆಳಗ್ಗೆಯೇ ಮಳೆ ಅಬ್ಬರ, ಮೆಜೆಸ್ಟಿಕ್-ಶಾಂತಿನಗರ ಸೇರಿ ಹಲವೆಡೆ ವರ್ಷಧಾರೆ

ಕರ್ನಾಟಕದ ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ (3.1° C ನಿಂದ 5.0° C). ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಾಮಾನ್ಯಕ್ಕಿಂತ 1.6° C ನಿಂದ 3.0° C ಹೆಚ್ಚಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *