ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​! – Kannada News | Bengaluru temperature :Extreme cold weather Karnataka, Orange alert for 5 districts, yellow alert for 10

ರಾಜ್ಯದಲ್ಲಿ ನಿಲ್ಲದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

ಬೆಂಗಳೂರು, ಡಿಸೆಂಬರ್ 20: ರಾಜ್ಯದೆಲ್ಲೆಡೆ ಶೀತದಲೆ (Weather Forecast) ಅಬ್ಬರಿಸುತ್ತಿದ್ದು, ಚಳಿಯ ಪ್ರಭಾವದಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಜನರನ್ನು ಬೆಂಬಿಡದೆ ಕಾಡುತ್ತಿದ್ದು, ಮೋಡ ಮುಸುಕಿದ ವಾತಾವರಣವಿರಲಿದೆ ಎಂದು ಇಲಾಖೆ ತಿಳಿಸಿದೆ. ಕಲಬುರಗಿ, ರಾಯಚೂರು ಸೇರಿದಂತೆ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಿರುವ ಇಲಾಖೆ, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಯಾವ ಜಿಲ್ಲೆಗಳಿಗೆ ಅಲರ್ಟ್​?

ಬೀದರ್, ಕಲಬುರಗಿ, ರಾಯಚೂಎಉ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿದ್ದು, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಿದೆ.

ಎಲ್ಲೆಲ್ಲಿ ಒಣ ಹವೆ

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಮುಂದುವರೆದ ಚಳಿ

ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣ ಜನರನ್ನು ಗಡ ಗಡ ನಡುಗಿಸುತ್ತಿದೆ. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಈ ಮಧ್ಯೆ ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 27°C ಇರಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *