ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಒಣ ಹವೆಯ ವಾತಾವರಣ
ಬೆಂಗಳೂರು, ಫೆಬ್ರವರಿ 20: ರಾಜ್ಯದಲ್ಲಿ ಹಲವು ದಿನಗಳಿಂದ ಶುಷ್ಕ ವಾತಾವರಣವೇ (Weather Forecast) ಆವರಿಸಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹತ್ತಾರು ದಿನಗಳಿಂದ ರಾಜ್ಯದಲ್ಲಿ ಒಣ ಹವೆ ಆವರಿಸಿದೆ. ಇನ್ನೂ ಕೆಲ ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಒಣಹವೆ?
ದಕ್ಷಿಣ ಒಳನಾಡಿನ ಮೈಸೂರು , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ , ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಮತ್ತು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇಂದೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಶುಷ್ಕ ವಾತಾವರಣ
ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 17°C ಇದ್ದು, ಗರಿಷ್ಠ 31°C ಇರಲಿದೆ ಎಂದು ಇಲಾಖೆ ತಿಳಿಸಿದೆ. ನಗರದ ತಾಪಮಾನದಲ್ಲಿ ತಕ್ಕಮಟ್ಟಿಗೆ ಸುಧಾರಣೆಯಾಗಿದ್ದು, ಶುಷ್ಕ ವಾತಾವರಣ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಸ್ಪಷ್ಟ ಆಕಾಶವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.