ಕಲಬುರಗಿ, ಏಪ್ರಿಲ್ 20: ಹಾಡಹಗಲೇ ಗುಂಡು ಹಾರಿಸಿ (firing) ನಂತರ ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಲೆ (kill) ಮಾಡಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬಲರಾಮ್ ಚೌಕ ಬಳಿ ನಡೆದಿದೆ. ಭಾಯ್ ಭಾಯ್ ಗ್ರೂಪ್ ಮುಖಂಡ ಇರ್ಫಾನ್(42) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯ ಹಿನ್ನೆಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯ ನಡೆದ ಸ್ಥಳಕ್ಕೆ ವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಡೆದಿದ್ದೇನು?
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಇಂದು ರಕ್ತಸಿಕ್ತವಾಗಿದೆ. ಪಟ್ಟಣದ ಬಲರಾಮ್ ಚೌಕ್ ಬಳಿಯ ಸೇವಾಲಾಲ್ ಮಂದಿರದ ಹತ್ತಿರ 42 ವರ್ಷದ ಇರ್ಫಾನ್ ಎಂಬಾತನನ್ನು ದುಷ್ಕರ್ಮಿಗಳು ಬರ್ಬರ ಹತ್ಯೆ ಮಾಡಿದ್ದಾರೆ. ಇರ್ಫಾನ್ ಪಟ್ಟಣದ ‘ಭಾಯ್ ಭಾಯ್’ ಗ್ರೂಪ್‌ನ ಮುಖಂಡ.
ಇದನ್ನೂ ಓದಿ: ನೇಣುಬಿಗಿದ ಸ್ಥಿತಿಯಲ್ಲಿ ಪೋಕ್ಸೋ ಕೇಸ್ ಆರೋಪಿ ಶವ ಪತ್ತೆ: ಆತ್ಮಹತ್ಯೆಯೋ? ಕೊಲೆಯೋ?
ಮಧ್ಯಾಹ್ನದ ವೇಳೆ ಇರ್ಫಾನ್ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು, ಮೊದಲು ಗುಂಡು ಹಾರಿಸಿದ್ದಾರೆ. ನಂತರ ಮಚ್ಚು ಸೇರಿದಂತೆ ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಕೊಲೆ ಮಾಡಿದ್ದಾರೆ.
ಹಳೆ ವೈಷಮ್ಯಕ್ಕೆ ಕೊಲೆ ಶಂಕೆ
ಸದ್ಯ ಭೀಕರ ಕೃತ್ಯಕ್ಕೆ ವಾಡಿ ಪಟ್ಟಣದ ಜನತೆ ಬೆಚ್ಚಿಬಿದ್ದಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆ ಸ್ಕೆಚ್ ಹಾಕಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಹತ್ಯೆಯಿಂದಾಗಿ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಪೊಲೀಸ್ ದೂರು ನೀಡುತ್ತಿದ್ದ ಎಂಬ ಕಾರಣಕ್ಕೆ ವ್ಯಕ್ತಿಯ ಕೊಲೆ
ವೈಯಕ್ತಿಕ ದ್ವೇಷ ಹಿನ್ನೆಲೆ ರಾಡ್ನಿಂದ ಹೊಡೆದು ವ್ಯಕ್ತಿಯ ಹತ್ಯೆ ಮಾಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುರಪುರದಲ್ಲಿ ನಡೆದಿದೆ. ರಾಡ್ನಿಂದ ಹೊಡೆದು ಕುಣಗಳ್ಳಿ ನಿವಾಸಿ ರಾಮಕೃಷ್ಣ ಬರ್ಬರ ಕೊಲೆ ಮಾಡಲಾಗಿದೆ.
ಇದನ್ನೂ ಓದಿ: 2ನೇ ಮದುವೆ ತಯಾರಿಯಲ್ಲಿದ್ದ ವೈದ್ಯನ ಭೀಕರ ಕೊಲೆ: ವಿವಾಹದ ಸಂಭ್ರಮದಲ್ಲಿದ್ದ ಮನೆಯಲ್ಲೀಗ ಸೂತಕ!
ಸುರಪುರ ಗ್ರಾಮದ ಮಲ್ಲಿಕಾರ್ಜುನ ಕೊಲೆ ಮಾಡಿ ಬಳಿಕ ತಾನೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾರೆ. ರಾಮಕೃಷ್ಣ ನನ್ನ ವಿರುದ್ಧ ಪೊಲೀಸರಿಗೆ ಪದೇ ಪದೆ ದೂರು ನೀಡುತ್ತಿದ್ದ. ಅದಕ್ಕೆ ಆತನನ್ನು ಕೊಲೆ ಮಾಡಿರೋದಾಗಿ ಆರೋಪಿ ಒಪ್ಪಿಕೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಮುತ್ತುರಾಜ್, ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
