Headlines

‘ಕಲ್ಕಿ 2898 ಎಡಿ’ಯಲ್ಲಿ ದೀಪಿಕಾ ಪಡುಕೋಣೆ ಬದಲಿಗೆ ಆಲಿಯಾ? – Kannada News | Alia Bhatt joined Kalki 2898 AD Part 2 movie

ಪ್ರಭಾಸ್ (Prabhas) ನಟನೆಯ ‘ಕಲ್ಕಿ 2898 ಎಡಿ’ ಸಿನಿಮಾ 2024 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಕಳೆದ ತಿಂಗಳು ಈ ಸಿನಿಮಾದ ಎರಡನೇ ಭಾಗದ ಚಿತ್ರೀಕರಣ ಆರಂಭವಾಗಿದೆ. ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಇನ್ನೂ ಕೆಲವರು ಸಿನಿಮಾದ ಚಿತ್ರೀಕರಣ ಆರಂಭಿಸಿದ್ದಾರೆ. ಆದರೆ ಚಿತ್ರತಂಡಕ್ಕೆ ಸಮಸ್ಯೆ ಒಂದು ಎದುರಾಗಿದೆ. ಮೊದಲ ಭಾಗದಲ್ಲಿ ಬಹಳ ಪ್ರಮುಖ ಪಾತ್ರದಲ್ಲಿ ನಟಿಸಿದ್ದ ದೀಪಿಕಾ ಪಡುಕೋಣೆ, ಎರಡನೇ ಭಾಗದಲ್ಲಿ ನಟಿಸುವುದಿಲ್ಲ ಎಂದಿದ್ದಾರೆ. ಅವರ ಪಾತ್ರಕ್ಕೆ ಪ್ರತ್ಯೇಕ ನಟಿಯ ಹುಡುಕಾಟದಲ್ಲಿ ಚಿತ್ರತಂಡ ಇದೆ. ಸುದ್ದಿಗಳ ಪ್ರಕಾರ ಈಗಾಗಲೇ ದೀಪಿಕಾರ ಪಾತ್ರಕ್ಕೆ ಬದಲಿ ವ್ಯವಸ್ಥೆಯನ್ನು ಚಿತ್ರತಂಡ ಮಾಡಿಕೊಂಡಿದೆ.

ಬಾಲಿವುಡ್ ಸ್ಟಾರ್ ನಟಿ ಆಲಿಯಾ ಭಟ್ ಅವರು ಇದೀಗ ‘ಕಲ್ಕಿ 2898 ಎಡಿ’ ಸಿನಿಮಾ ತಂಡ ಸೇರಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಅವರು ದೀಪಿಕಾ ಪಡುಕೋಣೆ ನಟಿಸಿದ್ದ ಪಾತ್ರದಲ್ಲಿ ನಟಿಸಲಿದ್ದಾರೆಯೇ ಅಥವಾ ಬೇರೆ ಪಾತ್ರದಲ್ಲಿ ನಟಿಸಲಿದ್ದಾರೆ ಎಂಬ ಬಗ್ಗೆ ಖಾತ್ರಿ ಇಲ್ಲ. ಆದರೆ ಆಲಿಯಾ ‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದಲ್ಲಿ ಇರುವುದು ಖಾತ್ರಿ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕೆಲ ದಿನಗಳ ಹಿಂದೆ ಹರಿದಾಡಿದ್ದ ಸುದ್ದಿಯ ಪ್ರಕಾರ, ದೀಪಿಕಾ ಪಡುಕೋಣೆ, ಮೊದಲ ಭಾಗದಲ್ಲಿ ನಿರ್ವಹಿಸಿದ್ದ ಪಾತ್ರವನ್ನು ಎರಡನೇ ಭಾಗದಲ್ಲಿ ಸಾಯಿ ಪಲ್ಲವಿ ನಿರ್ವಹಿಸಲಿದ್ದಾರೆ ಎನ್ನಲಾಗಿತ್ತು. ಚಿತ್ರತಂಡ ಈಗಾಗಲೇ ಸಾಯಿ ಪಲ್ಲವಿ ಜೊತೆಗೆ ಮಾತುಕತೆ ಆಡಿದ್ದು, ಸಾಯಿ ಪಲ್ಲವಿ ಸಹ ಒಪ್ಪಿಗೆ ಸೂಚಿಸಿ ಡೇಟ್ಸ್ ನೀಡಿದ್ದಾರೆ ಎಂದೆಲ್ಲ ಸುದ್ದಿಗಳು ಹರಿದಾಡಿದ್ದವು. ಆದರೆ ಈಗ ಆಲಿಯಾ ಭಟ್ ಸಹ ಚಿತ್ರತಂಡ ಸೇರಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದನ್ನೂ ಓದಿ:ಹಾಲಿವುಡ್ ಖ್ಯಾತ ನಟಿಗೆ ಪ್ರಭಾಸ್ ಸಿನಿಮಾ ಬಲು ಇಷ್ಟವಂತೆ

ಅಂದಹಾಗೆ ದೀಪಿಕಾ ಅವರ ಎಂಟು ಗಂಟೆ ಮಾತ್ರ ಕೆಲಸ ಮಾಡುವ ಕಟ್ಟುನಿಟ್ಟಿನ ನಿಯಮದಿಂದಾಗಿ ದೀಪಿಕಾರನ್ನು ‘ಕಲ್ಕಿ 2898 ಎಡಿ’ ಸಿನಿಮಾದ ಎರಡನೇ ಭಾಗದಿಂದ ಕೈಬಿಡಲಾಗಿದೆ. ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದಿಂದಲೂ ಇದೇ ಕಾರಣಕ್ಕೆ ಅವರು ಹೊರ ನಡೆದಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾವನ್ನು ನಾಗ್ ಅಶ್ವಿನ್ ನಿರ್ದೇಶನ ಮಾಡುತ್ತಿದ್ದು, ವೈಜಯಂತಿ ಮೂವೀಸ್ ನಿರ್ಮಾಣ ಮಾಡುತ್ತಿದ್ದಾರೆ. ಸಿನಿಮಾನಲ್ಲಿ ಹಲವಾರು ತಾರೆಯರಿದ್ದಾರೆ. ಕಮಲ್ ಹಾಸನ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ. ಅಮಿತಾಬ್ ಬಚ್ಚನ್ ಸಹ ಇದ್ದಾರೆ. ಸಿನಿಮಾನಲ್ಲಿ ದಿಶಾ ಪಟಾನಿ ನಾಯಕಿ. ಈಗ ಆಲಿಯಾ ಮತ್ತು ಸಾಯಿ ಪಲ್ಲವಿ ಸೇರಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕೀರ್ತಿ ಸುರೇಶ್ ಅವರು ಪಾತ್ರವೊಂದಕ್ಕೆ ಧ್ವನಿ ನೀಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *