ಬೆಂಗಳೂರು, ಜುಲೈ 02: ಮಾದಪಟ್ಟಣ ಗ್ರಾಮದ ಸಮೀಪವಿರುವ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಏಳು ಬಿಹಾರ ಮೂಲದ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದ ಪರಿಣಾಮ ಸಂಭವಿಸಿದ ದುರ್ಘಟನೆ ಕುರಿತು ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ ಅವರು, ದುರಂತದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವುದಾಗಿ ತಿಳಿಸಿದ್ದಾರೆ. ತಮ್ಮ ಇಲಾಖೆಗೆ ಸಂಬಂಧಿಸಿದ ಯಾವುದೇ ಅಂಶವಿದ್ದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಈ ಘಟನೆ ಅಕ್ರಮವಾಗಿ ನಡೆಯುತ್ತಿದೆಯೇ ಎಂಬುದರ ಬಗ್ಗೆಯೂ ಪರಿಶೀಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
