
ತಿರುವನಂತಪುರಂ, ಏಪ್ರಿಲ್ 1: ಕೇರಳದಲ್ಲಿ ಕಳ್ಳತನದ ಆರೋಪದ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯೊಬ್ಬನನ್ನು ಇಂದು ಬೆಳಿಗ್ಗೆ ಪೆರುಂಬವೂರ್ ಬಳಿ ಕೇರಳದ (Kerala) 6 ಸಹೋದ್ಯೋಗಿಗಳು ಥಳಿಸಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು (ಬುಧವಾರ) ಬೆಳಿಗ್ಗೆ ಪೆರುಂಬವೂರ್ ಬಳಿ ಅದೇ ರಾಜ್ಯದವರಾದ 6 ಜನ ಸೇರಿ ಈ ಕೊಲೆ ಮಾಡಿದ್ದಾರೆ. ಅವರು ಆತ ತಮ್ಮ ಫೋನ್ ಕದಿಯಲು ಪ್ರಯತ್ನಿಸುತ್ತಿದ್ದಾನೆ ಎಂದು ಅನುಮಾನಗೊಂಡು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
6 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೆರುಂಬವೂರ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆದರೆ, ಅವರನ್ನು ಔಪಚಾರಿಕವಾಗಿ ಬಂಧಿಸಲಾಗಿಲ್ಲ. ಅವರ ವಿರುದ್ಧ ಇನ್ನೂ ಪ್ರಕರಣ ದಾಖಲಿಸಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಇದನ್ನೂ ಓದಿ: ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
“ನಾವು ಇದಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಂಗ್ರಹಿಸುತ್ತಿದ್ದೇವೆ” ಎಂದು ಪೊಲೀಸರು ಹೇಳಿದ್ದಾರೆ. ಮೃತ ವ್ಯಕ್ತಿಗೆ 25 ವರ್ಷ ವಯಸ್ಸಾಗಿತ್ತು. ಆತ ಮತ್ತು ಇತರ 6 ಆರೋಪಿಗಳು ಪೆರುಂಬವೂರ್‌ನ ಪ್ಲೈವುಡ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
“ಆ ವ್ಯಕ್ತಿಯನ್ನು ಥಳಿಸಿದ ನಂತರ ಆರೋಪಿಗಳು ಆತನನ್ನು ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಚಿಕಿತ್ಸೆ ಆರಂಭಿಸುವ ಮೊದಲೇ ಆ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ತಕ್ಷಣ ಆಸ್ಪತ್ರೆಯ ಸಿಬ್ಬಂದು ನಮಗೆ ಮಾಹಿತಿ ನೀಡಿದರು” ಎಂದು ಪೊಲೀಸರು ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ