ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ, ಏಪ್ರಿಲ್ 6: ಪ್ರಧಾನಿ ನರೇಂದ್ರ ಮೋದಿ (PM Modi) ಇಂದು ಕಾಂಗ್ರೆಸ್ ಪಕ್ಷದ ವಿರುದ್ಧ ಅಸ್ಸಾಂನ ಚುನಾವಣಾ ರ್ಯಾಲಿಯಲ್ಲಿ ವಾಗ್ದಾಳಿ ನಡೆಸಿದರು. ನಮಗೆ ದೇಶ ಮೊದಲಾದರೆ ಕಾಂಗ್ರೆಸ್​ಗೆ “ಕುಟುಂಬ-ಮೊದಲು” ಎಂದು ಅವರು ಟೀಕಿಸಿದ್ದಾರೆ. ಹೊಜೈನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅಸ್ಸಾಂನಲ್ಲಿ ಈ ಬಾರಿ ಬಿಜೆಪಿ ಹ್ಯಾಟಿಕ್ ಬಾರಿಸಲಿದೆ ಎಂದಿದ್ದಾರೆ.

ಬಿಜೆಪಿಯ ಆಡಳಿತ ಮಾದರಿಯನ್ನು ಎತ್ತಿ ತೋರಿಸಿದ ಪ್ರಧಾನಿ ಮೋದಿ, ತಮ್ಮ ಪಕ್ಷವು ನಿರಂತರ ಅಭಿವೃದ್ಧಿ ಪ್ರಯತ್ನಗಳ ಮೂಲಕ ಅಸ್ಸಾಂ ಜನರ ಜೀವನವನ್ನು ಸುಧಾರಿಸಲು ಬದ್ಧವಾಗಿದೆ ಎಂದು ಹೇಳಿದರು. ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿಯನ್ನು ಪುನರುಚ್ಚರಿಸಿದ ಪ್ರಧಾನಿ ಮೋದಿ, ಅಸ್ಸಾಂನ ಜನರಿಗೆ ಪ್ರಗತಿ, ಸ್ಥಿರತೆ ಮತ್ತು ಉತ್ತಮ ಜೀವನ ಮಟ್ಟವನ್ನು ನೀಡಲು ಪಕ್ಷವು ಅವಿಶ್ರಾಂತವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *