ಬೆಂಗಳೂರು, ಜುಲೈ 04: ಕೇಂದ್ರ ಚುನಾವಣಾ ಆಯೋಗ ತನ್ನ ಕರ್ತವ್ಯ ಸರಿಯಾಗಿ ಮಾಡುತ್ತಿದೆ. ಆದರೆ ರಾಜ್ಯದಲ್ಲಿರುವ ಕಾಂಗ್ರೆಸ್ನ ಕತ್ತೆಗಳು SIR ಪ್ರಕ್ರಿಯೆ ಹಾಳುಮಾಡುತ್ತಿವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ. ಆ ಮೂಲಕ ಚುನಾವಣಾ ಆಯೋಗ ಕತ್ತೆ ಕಾಯುತ್ತಿದೆಯಾ ಎಂಬ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ನ ಕತ್ತೆಗಳು SIR ಪ್ರಕ್ರಿಯೆ ಅತಂತ್ರ ಮಾಡುತ್ತಿವೆ. ಕೇಂದ್ರ ಚುನಾವಣಾ ಆಯೋಗ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಆಗ್ರಹಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
