
ದಾವಣಗೆರೆ, ಮಾರ್ಚ್ 28: ಉಪಚುನಾವಣಾ ಅಖಾಡ ರಂಗೇರಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾವು ಪಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಪರ ಇಂದು ಪ್ರಚಾರಕ್ಕಿಳಿದಿದ್ದ ಶಾಸಕ ಪ್ರದೀಪ್ ಈಶ್ವರ್ಗೆ ಪ್ರತಿಭಟನೆ ಬಿಸಿ ತಟ್ಟಿದೆ. ಬಿಜೆಪಿ ಬಗ್ಗೆ ಅವಹೇಳನಕಾರಿ ಪದ ಬಳಕೆಗೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೂರಕೆ ತೋರಿಸಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಭಾರೀ ಹೈಡ್ರಾಮಾವೇ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.