ಚಿಕ್ಕಮಗಳೂರು, ಏ.3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಮತಎಣಿಕೆಗೆ ಸಂಬಂಧಿಸಿದಂತೆ ಮತ್ತೊಂದು ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ (Postal Ballots) ಮರು ಎಣಿಕೆಯಲ್ಲಿ ಹಾಲಿ ಶಾಸಕ ಟಿ.ಡಿ. ರಾಜೇಗೌಡ ಅವರಿಗೆ ಭಾರಿ ಹಿನ್ನಡೆಯಾಗಿದೆ. ನೆನ್ನೆ (ಮೇ.2) ಅವರು ಅಂಚೆ ಮತಗಳ ಮರು ಮತಎಣಿಕೆ ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಈ ಮತ ಏಣಿಕೆಯಲ್ಲಿ ಭಾರೀ ಗೊಂದಲಗಳು ಉಂಟಾಗಿತ್ತು. ಶನಿವಾರ ಏಳು ಗಂಟೆಗೆ ಶುರವಾದ ಈ ಮತ ಎಣಿಕೆ ಮಧ್ಯರಾತ್ರಿಯವರಿಗೆ ನಡೆದಿದೆ. ಇದೀಗ ಈ ಎಲ್ಲ ಗೊಂದಲು ಮಹಾತಿರುವು ಪಡೆದುಕೊಂಡಿದೆ. 2023ರ ಮೇ 13 ರಂದು ನಡೆದಿದ್ದ ಮತ ಎಣಿಕೆ ವೇಳೆ ಸಿಂಧು (Valid) ಎಂದು ಪರಿಗಣಿಸಲಾಗಿದ್ದ ಮತಗಳು, ಈಗಿನ ಮರು ಎಣಿಕೆ ವೇಳೆ ತಿರಸ್ಕೃತಗೊಂಡಿವೆ.
ಅಂಚೆ ಮತಗಳ ಪತ್ರದಲ್ಲಿ ರಾಜೇಗೌಡ ಮತ್ತು ಮತ್ತೊಬ್ಬ ಅಭ್ಯರ್ಥಿ ಇಬ್ಬರಿಗೂ ‘ಡಬ್ಬಲ್ ಟಿಕ್’ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ 258 ಮತಗಳನ್ನು ತಿರಸ್ಕರಿಸಲಾಗಿದೆ. ಈ ಹಿಂದೆ 569 ಅಂಚೆ ಮತಗಳನ್ನು ಪಡೆದಿದ್ದ ರಾಜೇಗೌಡರ ಪಟ್ಟಿಯಿಂದ ಈಗ 255 ಮತಗಳು ಮರು ಎಣಿಕೆ ವೇಳೆ ಕಡಿತಗೊಂಡಿವೆ. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಬಂದಿದ್ದ 692 ಅಂಚೆ ಮತಗಳಲ್ಲಿ ಕೇವಲ 2 ಮತಗಳು ಮಾತ್ರ ತಿರಸ್ಕೃತಗೊಂಡಿವೆ.
ಈಗಿನ ಮರು ಎಣಿಕೆಯಲ್ಲಿ ರಾಜೇಗೌಡರ 255 ಅಂಚೆ ಮತಗಳು ಕಡಿತಗೊಂಡಿರುವುದರಿಂದ, ಚುನಾವಣಾ ಫಲಿತಾಂಶದ ಅಂತಿಮ ಚಿತ್ರಣವು ಬದಲಾಗುವ ಸಾಧ್ಯತೆ ದಟ್ಟವಾಗಿದೆ. ತನಗೆ ಬಹುಮತ ಬಂದಿದೆ ಎಂದು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಈಗಾಗಲೇ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮರು ಎಣಿಕೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ವ್ಯತ್ಯಾಸ ಕಂಡುಬಂದ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ರಾಜೇಗೌಡ ಅವರು ಮಧ್ಯರಾತ್ರಿ 4 ಗಂಟೆಯವರೆಗೂ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿದ್ದರು.
ಇದನ್ನೂ ಓದಿ: ರಾತ್ರಿ 8 ಗಂಟೆಯಾದರೂ ಶೃಂಗೇರಿ ವಿಧಾನಸಭಾ ಕ್ಷೇತ್ರ ಮರು ಮತ ಎಣಿಕೆಯ ಅಧಿಕೃತ ಮಾಹಿತಿ ನೀಡದ ಅಧಿಕಾರಿಗಳು: ಹೈಡ್ರಾಮಾ
ಕಾಂಗ್ರೆಸ್ ಮುಖಂಡ ಸುದೀರ್ ಕುಮಾರ್ ಮುರೋಳಿ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಮತ್ತು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಮತಗಳ ‘ಟ್ಯಾಂಪರಿಂಗ್’ (ಮತಗಳ ತಿದ್ದುಪಡಿ) ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ರಾಜೇಗೌಡರ ಮತಪತ್ರಗಳಲ್ಲಿ ‘ಡಬ್ಬಲ್ ಟಿಕ್’ ಮಾಡಿ ಉದ್ದೇಶಪೂರ್ವಕವಾಗಿ ಅವುಗಳನ್ನು ತಿರಸ್ಕೃತಗೊಳಿಸಲಾಗಿದೆ ಎಂಬುದು ಕಾಂಗ್ರೆಸ್ ಆರೋಪ. ಇನ್ನು “ನಾವು ಸಂಪೂರ್ಣವಾಗಿ ಹೈಕೋರ್ಟ್ ಆದೇಶದಂತೆ ಮರು ಎಣಿಕೆ ಮಾಡಿದ್ದೇವೆ. ಹ್ಯಾಂಡ್ ಬುಕ್ ನಿಯಮಗಳ ಪ್ರಕಾರವೇ ಸಿಂಧು ಮತ್ತು ಅಸಿಂಧು ಮತಗಳನ್ನು ನಿರ್ಧರಿಸಲಾಗಿದೆ. ವರದಿಯನ್ನು ಈಗ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ,” ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ