ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಕರ್ನಾಟಕದಲ್ಲಿ ಅಕ್ರಮವಾಗಿ ಎಸ್​ಐಆರ್: ಪ್ರಲ್ಹಾದ್ ಜೋಶಿ ಆರೋಪ – Kannada News | Karnataka SIR Scam: Union Minister Pralhad Joshi Accuses Congress Govt of Backing Illegal Voter List Revision

ಬೆಂಗಳೂರು, ಜುಲೈ 6: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟದ ನಾಯಕರು ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಕೆಯಾಗಿದ್ದು, ಕೇಂದ್ರ ಸಚಿವರಾದ ಹೆಚ್​ಡಿ ಕುಮಾರಸ್ವಾಮಿ, ಪ್ರಲ್ಹಾದ್ ಜೋಶಿ, ವಿಪಕ್ಷ ನಾಯಕರಾದ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಶಾಸಕ ಡಾಕ್ಟರ್ ಅಶ್ವತ್ಥ್ ನಾರಾಯಣ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ಸರ್ಕಾರದ ಕಾಂಗ್ರೆಸ್ಸಿನ ಕುಮ್ಮಕ್ಕಿನಿಂದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ ಮಾಡಿದ್ದಾರೆ. ವಿಶೇಷವಾಗಿ ವಾಟ್ಸಾಪ್ ಗ್ರೂಪ್‌ಗಳನ್ನು ರಚಿಸಿ, ಸಂತೆ ನಡೆಯುವ ಪ್ರದೇಶಗಳು, ಮದರಸಾಗಳು ಮತ್ತು ಮಸೀದಿಗಳಲ್ಲಿ ಹಾಗೂ ಕಾಂಗ್ರೆಸ್ಸಿನ ಹಿಂದಿನ ಚುನಾಯಿತ ಪ್ರತಿನಿಧಿಗಳ ಮನೆಯಲ್ಲಿ, ನಿರ್ದಿಷ್ಟ ಸಮುದಾಯದ (ಮುಸ್ಲಿಮರ) ನಾಯಕರ ಮೂಲಕ ಓಣಿ ಮತ್ತು ಬೂತ್ ಮಟ್ಟದಲ್ಲಿ ಕೆಲಸ ಮಾಡಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ. ಬೂತ್ ಮಟ್ಟದ ಅಧಿಕಾರಿಗಳು (BLO) ಮಾಹಿತಿ ನೀಡದೆ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಲೋಪದೋಷಗಳನ್ನು ಸರಿಪಡಿಸಿ, ನಂತರ ಮತ್ತೆ ಎಸ್‌ಐಆರ್ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ. ಅಕ್ರಮಗಳ ಬಗ್ಗೆ ತಾವು ಸಂಗ್ರಹಿಸಿದ ಪೆನ್‌ಡ್ರೈವ್‌ನಲ್ಲಿರುವ ಮಾಹಿತಿಗಳನ್ನು ಚುನಾವಣಾ ಆಯೋಗಕ್ಕೆ ನೀಡಿದ್ದೇವೆ ಎಂದು ನಾಯಕರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *