ಮೈಸೂರು, ಜೂನ್ 28: ತಮ್ಮ ಕುರಿತು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಡಿರುವ ಮಾತುಗಳಿಗೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಕೌಂಟರ್ ಕೊಟ್ಟಿದ್ದಾರೆ. ನನ್ನ ಬೆಂಬಲದಿಂದಲೇ ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ದು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಭಿವೃದ್ಧಿ ಬಿಟ್ಟರೆ ಬೇರೆ ರಾಜಕಾರಣ ನನಗೆ ಗೊತ್ತಿಲ್ಲ. ಕುಮಾರ ಪರ್ವ ಮಾಡಿದ್ದು ಚಾಮುಂಡೇಶ್ವರಿ ಜನ ಮಾತ್ರ. ಬೇರೆ ಯಾವ ಕ್ಷೇತ್ರದಲ್ಲೂ ಈ ರೀತಿಯ ಸಮಾವೇಶ ಮಾಡಿಲ್ಲ. ನನಗೆ ಫೋನ್ , ಇನ್ಸ್ಟಾಗ್ರಾಂ ನೋಡಲು ಬರಲ್ಲ. ಎಸ್ಎಂಎಸ್ ನೋಡಲೂ ಬರಲ್ಲ. ಪಿಎಗಳು ಫೋನ್ ಮಾಡಿಕೊಡ್ತಾರೆ. ನಾನು ಟಿವಿ ನೋಡಿಲ್ಲ, ಹೀಗಾಗಿ ಅವರ ಹೇಳಿಕೆಯನ್ನ ಗಮನಿಸಿಲ್ಲ ಎಂದು ಜಿಟಿಡಿ ಹೇಳಿದ್ದಾರೆ. ಕಾಂಗ್ರೆಸ್ಗೆ ಸೇರುವ ವದಂತಿಗಳಿಗೂ ಇದೇ ವೇಳೆ ಅವರು ಸ್ಪಷ್ಟನೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
