
ಕೊಡಗು (ಮೇ 19): ಕೊಡಗಿನ ಪ್ರಸಿದ್ಧ ದುಬಾರೆ ಸಾಕಾನೆ ಶಿಬಿರದಲ್ಲಿ (Kodagu dubare elephant camp) ಎರಡು ಆನೆಗಳ ಮಧ್ಯೆ ನಡೆದ ಕಾದಾಟದಲ್ಲಿ ಸಿಲುಕಿ ಪ್ರವಾಸಿ ಮಹಿಳೆಯೋರ್ವಳು ಸಾವನ್ನಪ್ಪಿದ್ದು, ಈ ದುರಂತದಿಂದ ಇಡೀ ಜಿಲ್ಲೆಯನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಈ ಕರಾಳ ಘಟನೆ ಮಾಸುವ ಮುನ್ನವೇ ಕಾದಾಟದಲ್ಲಿ ಗಾಯಗೊಂಡಿದ್ದ ‘ಮಾರ್ತಾಂಡ’ (Marthanda) ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು(ಮೇ 19) ಕೊನೆಯುಸಿರೆಳೆದಿದೆ. ಹೌದು.. ಕೊಡಗಿನ ದುಬಾರೆ ಸಾಕಾನೆ ಶಿಬಿರದಲ್ಲಿ ‘ಮಾರ್ತಾಂಡ’ ಮತ್ತು ‘ಕಂಜನ್’ ಆನೆಗಳ ನಡುವೆ ನಡೆದ ಭೀಕರ ಕಾಳಗದಲ್ಲಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಇದೀಗ, ಕಾಳಗದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ‘ಮಾರ್ತಾಂಡ’ ಆನೆ ಸಹ ಸಾವನ್ನಪ್ಪಿದೆ. ಹೀಗೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ 1 ಘಟನೆಯಲ್ಲಿ ಎರಡು ಸಾವಿಗೆ ಕಾರಣವೇನು? ಯಾರನ್ನ ದೂಷಿಸೋದು?