Headlines

ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ – Kannada News | Nirmala Sitharaman Offers Special Prayers at Kapu New Marigudi Temple, Udupi

ಉಡುಪಿ, ಜೂ.13: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು (ಜೂನ್ 13, 2026) ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿರುವ ಸುಪ್ರಸಿದ್ಧ’ಹೊಸ ಮಾರಿಗುಡಿ’ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಅವರು, ಇದೇ ಮೊದಲ ಬಾರಿಗೆ ದೇವಿಯ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಾಗೂ ಅರ್ಚಕರು ಸಚಿವೆಗೆ ಸಾಂಪ್ರದಾಯಿಕ ಸ್ವಾಗತ ಕೋರಿ, ಪ್ರಸಾದ ವಿತರಿಸಿದರು. ಪೂಜೆಯ ನಂತರ ನಿರ್ಮಲಾ ಸೀತಾರಾಮನ್ ಅವರು ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಗಳ ಜೊತೆ ಕೆಲಕಾಲ ಸಮಾಲೋಚನೆ ನಡೆಸಿ, ಕ್ಷೇತ್ರ ಅಭಿವೃದ್ಧಿ ಹಾಗೂ ಮಾರಿಗುಡಿಯ ಇತಿಹಾಸದ ಕುರಿತು ಮಾಹಿತಿ ಪಡೆದುಕೊಂಡರು. ಉಡುಪಿ ಜಿಲ್ಲೆಯಲ್ಲಿ ಇಂದು ಬಿಜೆಪಿ ಆಯೋಜಿಸಲಾಗಿರುವ ‘ಜಿಲ್ಲಾ ಪ್ರಶಿಕ್ಷಣ ವರ್ಗ’ (ಕಾರ್ಯಕರ್ತರ ತರಬೇತಿ ಶಿಬಿರ) ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಕಾಪು ಮಾರಿಗುಡಿಗೆ ಭೇಟಿ ನೀಡಿದ್ದಾರೆ. ಈ ಹಿಂದೆ ಕ್ಷೇತ್ರಕ್ಕೆ ಕ್ರಿಕೆಟರ್​​ ಸೂರ್ಯ ಕುಮಾರ್​ ಯಾಧವ್​​ ಅವರು ಕೂಡ ಭೇಟಿ ನೀಡಿದ್ದರು. ಇನ್ನು ಸಚಿವೆ ನಿರ್ಮಲಾ ಸೀತಾರಾಮನ್ ಇಲ್ಲಿಂದ ಉಡುಪಿ ಕೃಷ್ಣ ಮಠಕ್ಕೂ ಭೇಟಿ ನೀಡಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *