
ಸಕಲೇಶಪುರ, ಮಾ.28: ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಮಳೆ ಅಬ್ಬರಿಸುತ್ತಿದ್ದು, ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಕುದರಂಗಿ ಗ್ರಾಮದ ಕಾರ್ಮಿಕ ಮಹಿಳೆಯರಾದ ರೂಪಾ, ಲಕ್ಷ್ಮಿ, ಸುಮಿತ್ರಾ ಮತ್ತು ಜಯಮ್ಮ ಸೇರಿದಂತೆ ಐವರು ದೀನಹಳ್ಳಿ ಗ್ರಾಮದ ಕಾಫಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಆಕಸ್ಮಿಕವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಐವರು ಮಹಿಳೆಯರು ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.ಗಾಯಗೊಂಡವರನ್ನು ಕೂಡಲೇ ಸಕಲೇಶಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇವರಲ್ಲಿ ರೂಪಾ ಎಂಬ ಕಾರ್ಮಿಕ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ನಿಗಾ ವಹಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ