ಕಾಮಕಾಂಡ ಪ್ರಕರಣ: ಮೂಡುಬಿದಿರೆ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್​​ಗೆ ಬಿಗ್ ಶಾಕ್

ಕಾಮಕಾಂಡ ಪ್ರಕರಣ:  ಮೂಡುಬಿದಿರೆ ಠಾಣೆ ಇನ್ಸ್‌ಪೆಕ್ಟರ್ ಸಂದೇಶ್​​ಗೆ  ಬಿಗ್ ಶಾಕ್

ಮಂಗಳೂರು, (ಮಾರ್ಚ್ 17): ಕೌಟುಂಬಿಕ ಕಲಹದ ವಿಚಾರಕ್ಕೆ ದೂರು ನೀಡಲು ಬಂದ ಮಹಿಳೆಯರನ್ನು ಅಸಭ್ಯವಾಗಿ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ (moodbidri inspector Sandesh) ವಿರುದ್ಧ ಈಗ ರಾಜ್ಯ ಮಹಿಳಾ ಆಯೋಗವು ಸಿಡಿದೆದ್ದಿದ್ದು, ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದೆ. ಇದರ ಬೆನ್ನಲ್ಲೇ ಇನ್ಸ್​ಪೆಕ್ಟರ್​​ ಸಂದೇಶನನ್ನು ಅಮಾನತು ಮಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ. ಆಡಿಯೋ, ವಿಡೀಯೋದಲ್ಲಿ ಮಹಿಳೆಯರ ಜೊತೆ ಅನುಚಿತ ವರ್ತನೆಯ ಕಾರಣ ನೀಡಿ ಸಂದೇಶ ಅವರನ್ನ ಸಸ್ಪೆಂಡ್ ಮಾಡಲಾಗಿದೆ.

ಸಂತ್ರಸ್ತೆ ಮಹಿಳೆ ಆರೋಪ ಸಂಬಂಧ ಕೆಲ ಆಡಿಯೋ ವಿಡಿಯೋಗಳ ಬಯಲಿಗೆ ಬರುತ್ತಿದ್ದಂತೆಯೇ ಇನ್ಸ್​ಪೆಕ್ಟರ್​ ವಿರುದ್ಧದ ಪ್ರಕರಣದ ತನಿಖೆ ನಡೆಸಿ ವರದಿ ನೀಡುವಂತೆ ಎಸಿಪಿ ಶ್ರೀಕಾಂತ್‌ಗೆ ಜವಾಬ್ದಾರಿ ನೀಡಲಾಗಿತ್ತು. ಮತ್ತೊಂದೆಡೆ ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಮಹಿಳೆಯರಿಗೆ ಕಿರುಕುಳ ಆರೋಪ ಸಂಬಂಧ ಶಾಸಕ ಉಮಾನಾಥ್ ಕೋಟ್ಯಾನ್ ಗೃಹ ಸಚಿವರನ್ನ ಭೇಟಿ ಮಾಡಿ ಮಾಡಿದ್ದು, ಸಂದೇಶ್ ಅವರನ್ನು ಅಮಾನತ್ತಿನಲ್ಲಿಟ್ಟು ತನಿಖೆ ಮಾಡುವಂತೆ ಮನವಿ ಮಾಡಿದ್ದರು. ಅಲ್ಲದೇ ಈ ಬಗ್ಗೆ ಮಹಿಳಾ ಆಯೋಗ ಸಹ ಸುಮಟೋ ಕೇಸ್ ದಾಖಲಿಸಿಕೊಂಡಿದ್ದು, ಪ್ರಕರಣದ ವರದಿ ನೀಡುವಂತೆ ಮಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು. ಈ ಎಲ್ಲಾ ಬೆಳವಣಿಗೆ ಬಳಿಕ ಇನ್ಸ್​ಪೆಕ್ಟರ್​ ಸಂದೇಶ ಅವರನ್ನು ಕೊನೆಗೂ ಅಮಾನತು ಮಾಡಲಾಗಿದೆ.

ಇದನ್ನೂ ಓದಿ: ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ

ಎಸಿಪಿ ತನಿಖಾ ವರದಿಯ ಪ್ರಮುಖ ಅಂಶಗಳು

  • ಸುಮತಿ ನಾಯಕ್ ಅವರು ದೂರು ಹಾಗೂ ಮಾಧ್ಯಮ ಹೇಳಿಕೆ ನೀಡಿದ್ದಾರೆ. ಅವರ ಮತ್ತು ಅವರ ಸಹೋದರಿಯ ನಡುವೆ ಕುಟುಂಬ ಸಮಸ್ಯೆಗಳು ಇದ್ದು, ಸುಮತಿ ನಾಯಕ್ ವಿರುದ್ಧ ಎರಡು ಪ್ರಕರಣಗಳು ಮತ್ತು ಅವರ ಸಹೋದರಿಯ ವಿರುದ್ಧ ಎರಡು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಒಂದು ಪ್ರಕರಣ ತನಿಖೆಯಲ್ಲಿದ್ದು, ಉಳಿದವು ಹೈಕೋರ್ಟ್‌ನಲ್ಲಿ ಸ್ಥಗಿತಗೊಂಡಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆಯಬೇಕಿದೆ.
  • ಅವಿತಾ ಮಿನೇಜಸ್ ಅವರು ಇನ್ಸ್‌ಪೆಕ್ಟರ್ ವಿರುದ್ಧ ಮಾಧ್ಯಮದಲ್ಲಿ ಹೇಳಿಕೆ ನೀಡಿದ ಮತ್ತೊಬ್ಬ ಮಹಿಳೆ. ಅವರ ಪತಿಯ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಒಂದರಲ್ಲಿ ಅವರು ಖುಲಾಸೆಯಾಗಿದ್ದಾರೆ. ಒಂದು ಪ್ರಕರಣದಲ್ಲಿ, ಅವರು ಮತ್ತು ಅವರ ಪತಿ ಕಿಡ್ನಿ ಚಿಕಿತ್ಸೆಗೆ ಸಂಗ್ರಹಿಸಿದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪವಿದೆ. ಸಾಕ್ಷ್ಯ ಸಂಗ್ರಹದ ನಂತರ, ಇವರಿಬ್ಬರ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ. ಇವರ ಮೇಲೆ ಯಾವುದೇ ಕಿರುಕುಳದ ಸಾಕ್ಷ್ಯ ದೊರಕಿಲ್ಲ. ಅವರು ಇನ್ಸ್‌ಪೆಕ್ಟರ್ ಹಣ ಕೇಳಿದರು ಹಾಗೂ ಕಿರುಕುಳ ನೀಡಿದರು ಎಂದು ಹೇಳಿದ ಸ್ಥಳದಲ್ಲಿ ಸಿಸಿಟಿವಿ ಇದ್ದು, ಅಲ್ಲಿದ್ದ ಇಬ್ಬರು ಮಾಧ್ಯಮ ಪ್ರತಿನಿಧಿಗಳು ಮತ್ತು ಒಬ್ಬ ವಕೀಲರು ಇಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದ್ದಾರೆ.
  •  ಮಾಧ್ಯಮದಲ್ಲಿ ಹೇಳಿಕೆ ನೀಡಿದ ಮಹಿಳೆಯರು ಮತ್ತು ವಿಡಿಯೋ/ಆಡಿಯೋದಲ್ಲಿ ಕಾಣುವ ಮಹಿಳೆಯರು ಬೇರೆಬೇರೆ ವ್ಯಕ್ತಿಗಳಾಗಿದ್ದಾರೆ.
  • ಆದರೆ ವಿಡಿಯೋ ಮತ್ತು ಆಡಿಯೋದಲ್ಲಿ ಇನ್ಸ್‌ಪೆಕ್ಟರ್ ಅಸಭ್ಯ ವರ್ತನೆ ತೋರಿದಂತೆ ಹಾಗೂ ಫೋನ್‌ನಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ಮಾತನಾಡಿದಂತೆ ಕಾಣುತ್ತದೆ.
  •  ವಿಡಿಯೋ/ಆಡಿಯೋದಲ್ಲಿ ಕಾಣುವ ಇಬ್ಬರು ಮಹಿಳೆಯರು ಯಾವುದೇ ದೂರು ನೀಡಲು ನಿರಾಕರಿಸಿದ್ದಾರೆ. ಅವರಿಗೆ ನಂತರವೂ ಹೇಳಿಕೆ ನೀಡಬಹುದೆಂದು ತಿಳಿಸಲಾಗಿದೆ.
    ಇದರಿಂದ, ಆಡಿಯೋ ಮತ್ತು ವಿಡಿಯೋ ಆಧಾರದ ಮೇಲೆ ಇನ್ಸ್‌ಪೆಕ್ಟರ್ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಗೋಚರಿಸುತ್ತಿದ್ದು, ಅವರನ್ನು ತಾತ್ಕಾಲಿಕವಾಗಿ ಅಮಾನತು (suspension) ಮಾಡಲಾಗಿದೆ. ಹೆಚ್ಚಿನ ತನಿಖೆ ಮುಂದುವರಿಯಲಿದೆ.

ಸಂದೇಶ್ ವಿರುದ್ಧ ಸ್ವಯಂಪ್ರೇರಿತ ಕೇಸ್

ಇನ್ನು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಹಿಳಾ ಆಯೋಗ, ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ (ಸುಮಟೋ ಕೇಸ್) ದಾಖಲಿಸಿಕೊಂಡಿದೆ. ಅಲ್ಲದೇ ಈ ಪ್ರಕರಣ ಸಂಬಂಧ ತನಿಖೆ ನಡೆಸಿ 5 ದಿನದೊಳಗೆ ವರದಿ ನೀಡುವಂತೆ ಮಂಗಳೂರ ನಗರ ಪೊಲೀಸ್ ಕಮಿಷನರ್​ಗೆ ಪತ್ರ ಬರೆದಿದೆ.

ಗಂಭೀರ ಆರೋಪಗಳ ಸುರಿಮಳೆ

ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸಂತ್ರಸ್ತ ಮಹಿಳೆಯರು ಅತ್ಯಂತ ಭೀಕರ ಆರೋಪಗಳನ್ನು ಮಾಡಿದ್ದಾರೆ. ಕೌಟುಂಬಿಕ ಸಮಸ್ಯೆಗೆ ನ್ಯಾಯ ಕೇಳಲು ಹೋದರೆ, ಅದಕ್ಕೆ ಪ್ರತಿಯಾಗಿ ಲೈಂಗಿಕ ಸುಖಕ್ಕೆ ಬೇಡಿಕೆ ಇಡುತ್ತಿದ್ದರು ಎಂಬುದು ಪ್ರಮುಖ ಆರೋಪ. ಅಷ್ಟೇ ಅಲ್ಲದೆ, ಗಂಡನನ್ನು ಬಂಧಿಸಿ ಬಳಿಕ ಅವರನ್ನು ಬಿಡುಗಡೆ ಮಾಡಲು ಹಣಕ್ಕಾಗಿ ಬೇಡಿಕೆ ಇಡುತ್ತಿದ್ದರು ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ಸ್‌ಪೆಕ್ಟರ್ ಸಂತ್ರಸ್ತೆಯ ಮಗನ ಮೇಲೆಯೂ ಹಲ್ಲೆ ನಡೆಸಿದ್ದಾರೆ ಎಂಬ ದೂರು ಕೇಳಿಬಂದಿದೆ. ಈ ಪ್ರಕರಣವು ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದು, ಉನ್ನತ ಅಧಿಕಾರಿಗಳ ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಬರಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *