Headlines

ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!

ಕಾರವಾರದಲ್ಲಿ ಅಬ್ಬರಿಸಿದ ಮಳೆರಾಯ; ಹಲವೆಡೆ ರಸ್ತೆಗಳು ಜಲಾವೃತ!

ಕಾರವಾರ, ಜೂನ್ 30: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಭಾರಿ ಅವಾಂತರ ಸೃಷ್ಟಿಯಾಗಿದೆ. ಕಾರವಾರ ಸೇರಿದಂತೆ ಅನೇಕ ಕಡೆಗಳಲ್ಲಿ ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದು, ಸಾರ್ವಜನಿಕರು ಪರದಾಡುವಂತಾಗಿದೆ.

ಹವಾಮಾನ ಇಲಾಖೆಯು ಜುಲೈ 2ರವರೆಗೆ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗುವಂತೆ ಜನರಿಗೆ ಮನವಿ ಮಾಡಿದ್ದಾರೆ. ನದಿ ದಡ ಹಾಗೂ ಕಡಲತೀರಕ್ಕೆ ಜನರು ತೆರಳದಂತೆ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಭಾರಿ ಮಳೆಯ ಪರಿಣಾಮವಾಗಿ, ಅನೇಕ ವಸತಿ ಪ್ರದೇಶಗಳು ಮತ್ತು ನಿವೇಶನಗಳಿಗೆ ನೀರು ನುಗ್ಗಿದೆ. ತುರ್ತು ಕಾರ್ಯಾಚರಣೆ ಕೇಂದ್ರಗಳು ಸಕ್ರಿಯವಾಗಿದ್ದು, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಮತ್ತು ಅನಗತ್ಯವಾಗಿ ಹೊರಗೆ ಹೋಗದಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *