ತುಮಕೂರು, ಜೂನ್ 04: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ಆಂಧ್ರಪ್ರದೇಶ ಮೂಲದವರು ಎನ್ನಲಾಗುತ್ತಿದೆ. ಇನ್ನು ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.