ಕಾರು, ಖಾಸಗಿ ಬಸ್ ಮುಖಾಮುಖಿ ಢಿಕ್ಕಿImage Credit source: Tv9 Kannada
ಯಾದಗಿರಿ, ಏಪ್ರಿಲ್ 17: ಕಾರು ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನ ದಾರುಣವಾಗಿ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಯಾದಗಿರಿಯಿಂದ ರಾಯಚೂರು ಕಡೆ ಹೊರಟಿದ್ದ ಕಾರು, ಬೆಂಗಳೂರಿನಿಂದ ಕಲಬುರಗಿ ಕಡೆ ಬರುತ್ತಿದ್ದ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ತೀವ್ರತೆಗೆ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
(ಮಾಹಿತಿ ಅಪ್ಡೇಟ್ ಆಗುತ್ತಿದೆ)
Published On – 11:33 am, Fri, 17 April 26