ಉಡುಪಿ, ಆಗಸ್ಟ್ 07: ಜಿಲ್ಲೆಯ ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೆಡ್ಮೆ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಸುಮಾರು ಒಂದು ಎಕರೆಗಿಂತಲೂ ಅಧಿಕ ಜಾಗದಲ್ಲಿ ಬಿರುಕು ಬಿಟ್ಟಿದೆ. ಭೂಕುಸಿತದ ಭೀತಿ ಎದುರಾಗಿದ್ದು, ಕ್ಷಣಕ್ಷಣಕ್ಕೂ ಗುಡ್ಡದಿಂದ ಮಣ್ಣು ಜಾರುತ್ತಿರುವುದರಿಂದ ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆತಂಕ ಮನೆಮಾಡಿದೆ. ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಸ್ಥಳೀಯ ಕುಟುಂಬಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಿದ್ದರೂ, ಪರ್ಯಾಯ ವಸತಿ ಹಾಗೂ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ವಯನಾಡು ಮಾದರಿಯ ದುರಂತ ಸಂಭವಿಸುವ ಮುನ್ನವೇ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ತಕ್ಷಣವೇ ಸೂಕ್ತ ರಕ್ಷಣೆ ಮತ್ತು ಪುನರ್ವಸತಿ ವ್ಯವಸ್ಥೆ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.