ಕಾಲಿವುಡ್ ನಟ ಸೂರ್ಯ ಜೊತೆ ಕೈಜೋಡಿಸಿದ ಹೊಂಬಾಳೆ ಫಿಲ್ಮ್ಸ್; ದೊಡ್ಡ ಘೋಷಣೆ – Kannada News | Hombale Films Teams Up with Suriya for Pan India Blockbuster; Gnanavel to Direct

ಕನ್ನಡ ಚಿತ್ರರಂಗದ ಜೊತೆ ಭಾರತೀಯ ಸಿನಿಮಾ ರಂಗದಲ್ಲೂ ತನ್ನದೇ ಆದ ವಿಶಿಷ್ಟ ಛಾಪು ಮೂಡಿಸಿರುವ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’  (Hombale Films)ಈಗ ಮತ್ತೊಂದು ದೊಡ್ಡ ಘೋಷಣೆ ಮಾಡಿದೆ. ಸದ್ಯ ಕೇವಲ ಸ್ಯಾಂಡಲ್‌ವುಡ್‌ಗಷ್ಟೇ ಸೀಮಿತವಾಗದೆ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ಸಾಲು ಸಾಲು ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನಿರ್ಮಿಸುತ್ತಿರುವ ಹೊಂಬಾಳೆ ಸಂಸ್ಥೆ, ಈಗ ಕಾಲಿವುಡ್ ಸ್ಟಾರ್ ನಟ ಸೂರ್ಯ ಜೊತೆ ಹೊಸ ಚಿತ್ರವನ್ನು ಅಧಿಕೃತವಾಗಿ ಘೋಷಿಸಿದೆ.

‘ದಿ ನೆಕ್ಸ್ಟ್ ಚಾಪ್ಟರ್’ ಆರಂಭ

‘ದಿ ನೆಕ್ಸ್ಟ್ ಚಾಪ್ಟರ್’ (#SuriyaXHombale) ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಹೊಂಬಾಳೆ ಫಿಲ್ಮ್ಸ್ ತನ್ನ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ವಿಶೇಷ ಪೋಸ್ಟ್ ಒಂದನ್ನು ಹಂಚಿಕೊಂಡಿದೆ. ‘ಕಳೆದ ಮೂರು ದಶಕಗಳಿಂದ ಸತ್ಯಕ್ಕೆ ಹತ್ತಿರವಾದ ಪಾತ್ರಗಳು, ನೈಜ ಬದುಕಿನ ತೂಕವನ್ನು ಹೊತ್ತ ಕ್ಯಾರೆಕ್ಟರ್‌ಗಳು ಹಾಗೂ ಅದ್ಭುತ ಸಾಹಸಗಳ ಮೂಲಕ ಕೋಟ್ಯಂತರ ಪ್ರೇಕ್ಷಕರ ಹೃದಯ ಗೆದ್ದಿರುವ ಈ ತಲೆಮಾರಿನ ಅತ್ಯಂತ ನಿರ್ಭೀತ ನಟ ಸೂರ್ಯ ಅವರನ್ನು ನಮ್ಮ ಸಂಸ್ಥೆಗೆ ಹೆಮ್ಮೆಯಿಂದ ಸ್ವಾಗತಿಸುತ್ತಿದ್ದೇವೆ’ ಎಂದು ಹೊಂಬಾಳೆ ಬರೆದುಕೊಂಡಿದೆ.

ಇದನ್ನೂ ಓದಿ: ಜೂ.ಎನ್​​ಟಿಆರ್​​ಗೆ ವಿಶ್ ಮಾಡಿದ ಹೊಂಬಾಳೆ ಫಿಲ್ಮ್ಸ್; ಇದರ ಹಿಂದಿದೆ ದೊಡ್ಡ ಲೆಕ್ಕಾಚಾರ?

ಈ ಬಿಗ್ ಬಜೆಟ್ ಸಿನಿಮಾಗೆ ಯಾರು ನಿರ್ದೇಶನ ಮಾಡಲಿದ್ದಾರೆ ಮತ್ತು ಯಾರೆಲ್ಲಾ ತಂತ್ರಜ್ಞರು ಇರಲಿದ್ದಾರೆ ಎಂಬ ಕುತೂಹಲಕ್ಕೆ ಈ ಟ್ವೀಟ್‌ನಲ್ಲೇ ಸುಳಿವು ಸಿಕ್ಕಿದೆ.

  • ಜ್ಞಾನವೇಲ್ ಆ್ಯಕ್ಷನ್ ಕಟ್: ಹೊಂಬಾಳೆ ಫಿಲ್ಮ್ಸ್ ಮಾಡಿರುವ ಟ್ವೀಟ್‌ನಲ್ಲಿ ಖ್ಯಾತ ನಿರ್ದೇಶಕ ಟಿ.ಜೆ. ಜ್ಞಾನವೇಲ್ ಅವರನ್ನು ಟ್ಯಾಗ್ ಮಾಡಲಾಗಿದ್ದು, ಈ ಚಿತ್ರಕ್ಕೆ ಅವರೇ ಕಥೆ ಬರೆದು ನಿರ್ದೇಶನ ಮಾಡುವುದು ಬಹುತೇಕ ಖಚಿತವಾಗಿದೆ.
  • ಸಾಯಿ ಅಭಯಂಕರ್ ಮ್ಯೂಸಿಕ್: ಇತ್ತೀಚಿನ ಟ್ರೆಂಡಿಂಗ್ ಮ್ಯೂಸಿಕ್ ಸೆನ್ಸೇಷನ್ ಸಾಯಿ ಅಭಯಂಕರ್ ಅವರನ್ನು ಸಹ ಪೋಸ್ಟ್‌ನಲ್ಲಿ ಟ್ಯಾಗ್ ಮಾಡಲಾಗಿದ್ದು, ಚಿತ್ರಕ್ಕೆ ಇವರೇ ಸಂಗೀತ ಸಂಯೋಜನೆ ಮಾಡುವ ಸಾಧ್ಯತೆ ದಟ್ಟವಾಗಿದೆ.
  • ಕಯಾದು ಲೋಹರ್ ನಾಯಕಿ: ಈ ಬಹುನಿರೀಕ್ಷಿತ ಸಿನಿಮಾದಲ್ಲಿ ಸೂರ್ಯ ಅವರಿಗೆ ಜೋಡಿಯಾಗಿ ನಟಿ ಕಯಾದು ಲೋಹರ್ ಕಾಣಿಸಿಕೊಳ್ಳಲಿದ್ದಾರೆ ಎಂಬ ಬಲವಾದ ಮಾಹಿತಿ ಕೇಳಿಬಂದಿದೆ.

The next chapter… #SuriyaXHombale

He built it.
Frame by frame. Film by film. Fight by fight.

Roles that bled truth.
Characters that carried the weight of real lives.
A journey defined by courage, conviction, and craft.

Three decades of truth on screen.
Countless hearts… pic.twitter.com/HoZOgQRbC7

— Hombale Films (@hombalefilms) June 29, 2026

ವಿಭಿನ್ನ ಭಾಷೆಗಳಲ್ಲಿ ವೈವಿಧ್ಯಮಯ ಸಿನಿಮಾಗಳನ್ನು ನೀಡುತ್ತಾ ಪ್ರೇಕ್ಷಕರನ್ನು ರಂಜಿಸುತ್ತಿರುವ ಹೊಂಬಾಳೆ ಫಿಲ್ಮ್ಸ್ ಈಗ ಸೂರ್ಯ ಜೊತೆ ಕೈ ಜೋಡಿಸಿದ್ದು ಖುಷಿ ಮೈಡಿಸಿದೆ. ಇವರ ಈ ಹೊಸ ಕಾಂಬಿನೇಷನ್ ಸಿನಿರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆಯನ್ನು ಸೃಷ್ಟಿಸಿದ್ದು, ಸಿನಿಮಾ ಪ್ರೇಕ್ಷಕರು ಅಧಿಕೃತ ಅಪ್‌ಡೇಟ್‌ಗಾಗಿ ಕಾತರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *