ಮಂಡ್ಯ, ಜುಲೈ 31: ನೀರು ಹರಿಸಬೇಕೆಂಬ CWMA ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ ಕಾವು ತೀವ್ರಗೊಂಡಿದೆ. ಸಂಜಯ ಸರ್ಕಲ್ನಲ್ಲಿ ರೈತರು ಮತ್ತು ಕನ್ನಡ ಸಂಘಟನೆಗಳ ಧರಣಿ ನಡೆಸಿದ್ದರೆ, ಕಾವೇರಿ ಹೋರಾಟಕ್ಕೆ ಪಡಿತರ ವಿತರಕರ ಸಂಘವೂ ಬೆಂಬಲ ನೀಡಿದೆ. ಬೆಂಗಳೂರು-ಮೈಸೂರು ಹಳೆಯ ಹೆದ್ದಾರಿಯಲ್ಲಿ ಕೂತು ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮತ್ತೊಂದೆಡೆ ಶ್ರೀರಂಗಪಟ್ಟಣ ತಾಲೂಕಿನ ಎಸ್ನಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರಮುಖರು ಭಾಗಿಯಾಗಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.