ಮೈಸೂರಿನಲ್ಲಿ ಭಾನುವಾರ (ಜುಲೈ 12) ಹಿರಿಯ ಗಾಯಕಿ ಎಸ್. ಜಾನಕಿ (S Janaki) ಅವರ ಅಂತ್ಯಕ್ರಿಯೆ ಮಾಡಲಾಗಿತ್ತು. ಇಂದು (ಜುಲೈ 13) ಕಾವೇರಿ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗಿದೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೋಸಾಯ್ ಘಾಟ್ನಲ್ಲಿ ಜಾನಕಿ ಅವರ ಕುಟುಂಬಸ್ಥರು ಅಸ್ಥಿ ವಿಸರ್ಜನೆ ಮಾಡಿದ್ದಾರೆ. ಜಾನಕಿ ಮೊಮ್ಮಗಳು ಅಪ್ಸರಾ ಅವರು ವಿಧಿವಿಧಾನ ಪೂಜೆ ನೆರವೇರಿಸಿದರು. ಅರ್ಚಕ ರಮೇಶ್ ಶರ್ಮಾ ನೇತೃತ್ವದಲ್ಲಿ ವಿಧಿವಿಧಾನ ಕಾರ್ಯ ಮಾಡಲಾಗಿದೆ. ಹಲವು ಭಾಷೆಗಳಲ್ಲಿ ಹಾಡಿದ್ದರೂ ಕೂಡ ಜಾನಕಿ ಅವರು ಕರ್ನಾಟಕದ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಮೈಸೂರಿನಲ್ಲೇ ಅವರ ಸ್ಮಾರಕ ನಿರ್ಮಾಣ ಆಗಬೇಕು ಎಂದು ಹಂಸಲೇಖ ಸೇರಿದಂತೆ ಹಲವರು ಒತ್ತಾಯಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
