ಕಾವೇರಿ ವಿವಾದ: KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು – Kannada News | Karnataka Cauvery Water Dispute: Women Protesters Perform Urulu Seve at KRS Dam

ಮಂಡ್ಯ, ಜುಲೈ 31: ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಕೆಆರ್‌ಎಸ್ ಜಲಾಶಯದ ಗೇಟ್ ಮುಂದೆ ಶುಕ್ರವಾರ ಬೆಳಗ್ಗೆಯೇ ಮಹಿಳಾ ಹೋರಾಟಗಾರರು ಉರುಳು ಸೇವೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕಾವೇರಿ ನೀರು ನಿರ್ವಹಣಾ ಸಮಿತಿ (CWMA) ಮತ್ತು CWRC ನೀಡಿದ ಆದೇಶದ ವಿರುದ್ಧ ರೈತರು, ಕನ್ನಡಪರ ಸಂಘಟನೆಗಳು ತಿರುಗಿ ಬಿದ್ದಿವೆ. ಪದೇ ಪದೇ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಕುಡಿಯುವ ನೀರಿಗೂ ತೊಂದರೆಯಾಗುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವುದು ಸರಿಯಲ್ಲ ಎಂದು ಆಗ್ರಹಿಸಿದರು.

ಮುಂಜಾನೆಯಿಂದಲೇ ಆರಂಭವಾದ ಪ್ರತಿಭಟನೆ ತಾರಕ್ಕೇರುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಕರ್ನಾಟಕ ಸರ್ಕಾರ ಸರ್ವ ಪಕ್ಷಗಳ ಸಭೆ ಕರೆದು, ರೈತರ ಹಿತ ಕಾಪಾಡಲು ಮಾಜಿ ಸಿಎಂ ಬಂಗಾರಪ್ಪ ಅವರಂತೆ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ಈ ಅನ್ಯಾಯ ನಿಲ್ಲಬೇಕು ಮತ್ತು ರೈತರಿಗೆ ನ್ಯಾಯ ಸಿಗಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *