ಕಿಲ್ಲರ್ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿImage Credit source: Tv9 Kannada
ದೇವನಹಳ್ಳಿ, ಜೂನ್ 19: ಕಿಲ್ಲರ್ ಬಿಎಂಟಿಸಿಗೆ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಅಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲಿಬೆಲೆ ಬಳಿ ನಡೆದಿದೆ. ಬೈಕ್ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ದಂಪತಿ, ಪುತ್ರಿ ಮತಪಟ್ಟಿದ್ದಾರೆ. ಮೃತರನ್ನುಅರುಣ್(35), ಅನುಷಾ(32) ಮತ್ತು ಹರ್ನಾ(2) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ 5 ವರ್ಷದ ಅನುಶಿಕಾಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸೂಲಿಬೆಲೆಯಿಂದ ಹೊಸಕೋಟೆ ಕಡೆಗೆ ಹೋಗ್ತಿದ್ದ ಬಿಎಂಟಿಸಿ ಬಸ್ ದೇವನಹಳ್ಳಿ ಕಡೆ ಇಬ್ಬರು ಮಕ್ಕಳೊಂದಿಗೆ ಹೋಗ್ತಿದ್ದ ದಂಪತಿ ಇದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ರಾಂಗ್ ರೂಟ್ನಲ್ಲಿ ಬಿಎಂಟಿಸಿ ಬಸ್ ಬಂದಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಮೃತರು ದೇವನಹಳ್ಳಿ ತಾಲೂಕಿನ ತೆಲ್ಲಹಳ್ಳಿ ಗ್ರಾಮದ ನಿವಾಸಿಗಳು ಎಂಬುದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಸೂಲಿಬೆಲೆ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಲ್ಲೊಂದು ವಿಚಿತ್ರ ಘಟನೆ; ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ ಕ್ಷಣ ಮಾತ್ರದಲ್ಲಿ ಸಾವು!
2 ದಿನಗಳಲ್ಲಿ ಬಿಎಂಟಿಸಿಗೆ ನಾಲ್ವರು ಬಲಿ
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜ್ಞಾನಭಾರತಿ ಮಂಗನಹಳ್ಳಿ ಕ್ರಾಸ್ ಬಳಿ ನಿನ್ನೆ (ಜೂನ್ 18) ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ರಾಜು(58) ಮೃತ ದುರ್ದೈವಿಯಾಗಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದ ಈತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬಸ್ ಹರಿದು ದುರಂತ ಸಂಭವಿಸಿತ್ತು. ಮನೆಗೆ ತರಕಾರಿ ತರೋಣ ಅಂತಾ ಹೊರಗೆ ಬಂದಿದ್ದ ರಾಜು, ಮಂಗನಹಳ್ಳಿ ಕ್ರಾಸ್ ಬಳಿ ರಸ್ತೆ ದಾಟುವ ವೇಳೆ ಅಮ್ಮ ಆಶ್ರಮ ಸರ್ಕಲ್ ಕಡೆಯಿಂದ ಅತಿ ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ರಾಜು ಮೈ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಘಟನೆ ಮಾಸುವ ಮುನ್ನವೇ ಬಿಎಂಟಿಸಿ ಬಸ್ ಈಗ ಮತ್ತೆ ಮೂವರ ಬಲಿ ಪಡೆದಿರೋದು ಆತಂಕಕ್ಕೆ ಕಾರಣವಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
