ಬೆಂಗಳೂರು, (ಜುಲೈ 18): ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಇಂದು (ಜುಲೈ 18) ಸಂಜೆ ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ಸೇರಿದಂತೆ ಹಲವು ವಯೋಸಹಜ ಕಾಯಿಲೆಗಳಿಂದ ಚೆನ್ನಮ್ಮಾ ಅವರು ಬಳಲುತ್ತಿದ್ದರು. ಹೀಗಾಗಿ ಅವರನ್ನು ಜುಲೈ 15ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿದೇ ಇಂದು ಕೊನೆಯುಸಿರೆಳೆದಿದ್ದಾರೆ. ಇನ್ನು ತಮಗೆ ಬೆನ್ನೆಲುಬಾಗಿದ್ದ ಪತ್ನಿಯನ್ನು ಕಳೆದುಕೊಂಡು ದೇವೇಗೌಡ್ರು ಕಣ್ಣೀರಿಟ್ಟಿದ್ದಾರೆ.
